ಉಡುಪಿ: ಮತ್ತೆ 88 ಮಂದಿಯ ಸ್ಯಾಂಪಲ್ ನೆಗೆಟಿವ್
ಉಡುಪಿ, ಮೇ 12: ನೋವೆಲ್ ಕೊರೋನ ವೈರಸ್ (ಕೋವಿಡ್- 19) ಸೋಂಕಿನ ಪರೀಕ್ಷೆಗಾಗಿ ಕಳುಹಿಸಿದ ಶಂಕಿತರ ಗಂಟಲು ದ್ರವದ ಮಾದರಿಗಳಲ್ಲಿ ಮಂಗಳವಾರ ಮತ್ತೆ 88 ಮಂದಿಯ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಆಗಿವೆ. ಬಾಕಿ ಉಳಿದಿರುವ ಮಾದರಿಗಳೊಂದಿಗೆ ಇಂದು ಕಳುಹಿಸಿದ 24 ಸ್ಯಾಂಪಲ್‌ಗಳು ಸೇರಿದಂತೆ ಒಟ್ಟು 87 ಸ್ಯಾಂಪಲ್‌ಗಳ ವರದಿ ಬರಲು ಬಾಕಿ ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ರೋಗದ ಗುಣಲಕ್ಷಣವಿರುವ ಇನ್ನೂ 24 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳಲ್ಲಿ ಒಬ್ಬರು ಕೊರೋನ ಶಂಕಿತರು, ಒಬ್ಬರು ಸಂಪರ್ಕಿತರು, ಐವರು ತೀವ್ರ ಉಸಿರಾಟ ತೊಂದರೆಯವರು, ಎಂಟು ಮಂದಿ ಶೀತಜ್ವರದಿಂದ ಬಳಲುವವರು ಹಾಗೂ 9 ಮಂದಿ ಕೊರೋನ ಹಾಟ್‌ಸ್ಪಾಟ್‌ನಿಂದ ಬಂದವರ ಸ್ಯಾಂಪಲ್‌ಗಳು ಸೇರಿವೆ ಎಂದು ಅವರು ತಿಳಿಸಿದರು.
ಇಂದು ರೋಗದ ಗುಣಲಕ್ಷಣವಿರುವ ಇನ್ನೂ 24 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳಲ್ಲಿ ಒಬ್ಬರು ಕೊರೋನ ಶಂಕಿತರು, ಒಬ್ಬರು ಸಂಪರ್ಕಿತರು, ಐವರು ತೀವ್ರ ಉಸಿರಾಟ ತೊಂದರೆಯವರು, ಎಂಟು ಮಂದಿ ಶೀತಜ್ವರದಿಂದ ಬಳಲುವವರು ಹಾಗೂ 9 ಮಂದಿ ಕೊರೋನ ಹಾಟ್‌ಸ್ಪಾಟ್‌ನಿಂದ ಬಂದವರ ಸ್ಯಾಂಪಲ್‌ಗಳು ಸೇರಿವೆ ಎಂದು ಅವರು ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆಯವರೆಗೆ ಒಟ್ಟು 1692 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಪಡೆಯಲಾಗಿದೆ. ಇವುಗಳಲ್ಲಿ 1605ರ ವರದಿ ಬಂದಿದ್ದು, 1602 ನೆಗೆಟಿವ್ ಆಗಿವೆ. ಜಿಲ್ಲೆಯಲ್ಲಿ ಈವರೆಗೆ ಮೂರು ವರದಿಗಳು ಮಾತ್ರ ಪಾಸಿಟಿವ್ ಆಗಿ ಬಂದಿವೆ.
ಶಂಕಿತ ನೋವೆಲ್ ಕೊರೋನ ಸೋಂಕಿನ ಪರೀಕ್ಷೆಗಾಗಿ ಇಂದು 15 ಮಂದಿ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿಗೆ ದಾಖಲಾಗಿ ದ್ದಾರೆ. ಇವರಲ್ಲಿ ಒಬ್ಬರು ಕೋವಿಡ್ ಶಂಕಿತರು, ನಾಲ್ವರು ತೀವ್ರತರದ ಉಸಿರಾಟ ತೊಂದರೆಗೆ ಹಾಗೂ 10 ಮಂದಿ ಶೀತಜ್ವರ ಬಾಧೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಖಲಾದವರಲ್ಲಿ 8 ಮಂದಿ ಪುರುಷರು, 7 ಮಂದಿ ಮಹಿಳೆಯರು ಸೇರಿದ್ದಾರೆ. ವಿವಿಧ ಆಸ್ಪತ್ರೆಗಳ ಐಸೋಲೇಶನ್ ವಾರ್ಡಿನಿಂದ ಇಂದು 9 ಮಂದಿ ಬಿಡುಗಡೆಗೊಂಡಿದ್ದು, 73 ಮಂದಿ ಇನ್ನೂ ವೈದ್ಯರ ನಿಗಾದಲ್ಲಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.
ಜಿಲ್ಲೆಯಲ್ಲಿ ಕೊರೋನ ಸೋಂಕಿನ ಗುಣಲಕ್ಷಣದ ವಿವಿಧ ಹಿನ್ನೆಲೆಯೊಂದಿಗೆ ಮಂಗಳವಾರ 33 ಮಂದಿ ಹೊಸದಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4338 ಮಂದಿಯನ್ನು ಕೊರೋನದ ತಪಾಸಣೆಗಾಗಿ ನೋಂದಣಿ ಮಾಡಿಕೊಂಡಂತಾಗಿದೆ. ಇವರಲ್ಲಿ 2869 (ಇಂದು 27) ಮಂದಿ 28 ದಿನಗಳ ನಿಗಾವನ್ನೂ, 3593 (41) ಮಂದಿ 14 ದಿನಗಳ ನಿಗಾವನ್ನು ಪೂರ್ಣಗೊಳಿಸಿದ್ದಾರೆ.
ಜಿಲ್ಲೆಯಲ್ಲಿ ಈಗಲೂ 656 ಮಂದಿ ಹೋಮ್ ಕ್ವಾರಂಟೈನ್ ಹಾಗೂ 16 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಡಾ. ಸುಧೀರ್ ಚಂದ್ರ ಸೂಡ ವಿವರಿಸಿದರು.
ಪಡುಬಿದ್ರಿ ವ್ಯಾಪಾರಿ ವರದಿ ನೆಗೆಟಿವ್
ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರು ಹಾಗೂ ಅಲ್ಲಿ ಪಾಸಿಟಿವ್ ಬಂದವರ ಸಂಪರ್ಕಕ್ಕೆ ಬಂದವರಲ್ಲಿ ಉಡುಪಿ ಜಿಲ್ಲೆಗೆ ಸೇರಿದ 17 ಮಂದಿಯ ಗಂಟಲುದ್ರವದ ಮಾದರಿಯ ವರದಿ ಇಂದು ಸಹ ಬಂದಿಲ್ಲ. ಅವರೆಲ್ಲರೂ ಈಗಲೂ ಆಸ್ಪತ್ರೆ ಕ್ವಾರಂಟೈನ್‌ನಲ್ಲಿಯೇ ಇದ್ದಾರೆ ಎಂದು ಡಾ. ಸೂಡ ತಿಳಿಸಿದರು.
ಇದರಿಂದ ಕಳೆದ ತಿಂಗಳು ತಮಿಳುನಾಡಿನಿಂದ ಕಾರ್ಕಳಕ್ಕೆ ಸಿಮೆಂಟ್ ತಂದು ಊರಿಗೆ ಮರಳಿದ ಬಳಿಕ ಕೊರೋನ ಸೋಂಕಿಗೆ ಪಾಸಿಟಿವ್ ಆಗಿದ್ದ ಲಾರಿ ಚಾಲಕನ ಸಂಪರ್ಕಕ್ಕೆ ಬಂದ ಕಾರ್ಕಳ ಅಂಗಡಿಯ ಮಾಲಕ ಸೇರಿದಂತೆ ಐವರ ವರದಿ ಸಹ ಇಂದು ಬಂದಿಲ್ಲ. ಆದರೆ ಉತ್ತರ ಕರ್ನಾಟಕಕ್ಕೆ ಹೋಗಿ ಬಂದ ಜ್ವರಕ್ಕೆ ತುತ್ತಾದ ಪಡುಬಿದ್ರಿ ವ್ಯಾಪಾರಿಯೊಬ್ಬರ ವರದಿ ನೆಗೆಟಿವ್ ಆಗಿ ಬಂದಿದೆ ಎಂದು ಡಿಎಚ್‌ಓ ತಿಳಿಸಿದರು.