ಲಾಕ್ ಡೌನ್ 4: ಪ್ರಧಾನಿ ಮೋದಿ ಹೇಳಿದ್ದೇನು?

Update: 2020-05-12 15:23 GMT

ಹೊಸದಿಲ್ಲಿ: ಕೊರೋನ ವೈರಸ್ ನಿಂದಾಗಿ ಜಗತ್ತೇ ಕಂಗಾಲಾಗಿದ್ದು, ಇದುವರೆಗೂ ಕಂಡು ಕೇಳರಿಯದಂತಹ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ 4  ಖಚಿತ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಕೊರೋನ ದೀರ್ಘ ಸಮಯದವರೆಗೆ ನಮ್ಮ ಜೊತೆಗಿರಲಿದೆ ಎಂದು ವಿಜ್ಞಾನಿಗಳು, ತಜ್ಞರು ಹೇಳಿದ್ದಾರೆ. ನಾವು ಇದನ್ನು ಒಪ್ಪಿಕೊಂಡು ಮುಂದೆ ಸಾಗಬೇಕು. ಆದರೆ ನಮ್ಮ ಉದ್ದೇಶ, ಗುರಿಯನ್ನು ಕೈಚೆಲ್ಲಬಾರದು. ಕೊರೋನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಲಾಕ್ ಡೌನ್ 4.0 ಅತ್ಯಗತ್ಯವಾಗಿದ್ದು, ಈ ಬಗ್ಗೆ ಮೇ 18ರ ಮೊದಲು ಸಂಪೂರ್ಣ ಮಾಹಿತಿ ನೀಡಲಾಗುವುದು. ಲಾಕ್ ಡೌನ್ 4.0 ವಿಭಿನ್ನವಾಗಿರಲಿದೆ. ಮಾರ್ಗಸೂಚಿಗಳಲ್ಲಿ ಬದಲಾವಣೆಗಳಿರಲಿದೆ ಎಂದವರು ಹೇಳಿದರು.

ಇದೇ ಸಂದರ್ಭ ಅವರು, ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು. ಸ್ಥಳೀಯ ಉತ್ಪನ್ನಗಳನ್ನು ಜನರು ಖರೀದಿಸಬೇಕು, ಉತ್ಪಾದಕರಿಗೆ ಪ್ರೋತ್ಸಾಹ ನೀಡಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News