ಅಫ್ಘಾನಿಸ್ತಾನ: ಅಂತ್ಯಸಂಸ್ಕಾರದಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟ, ಕನಿಷ್ಠ 40 ಸಾವು
Update: 2020-05-12 21:53 IST
ಜಲಾಲಾಬಾದ್ (ಅಫ್ಘಾನಿಸ್ತಾನ), ಮೇ 12: ಪೂರ್ವ ಅಫ್ಘಾನಿಸ್ತಾನದಲ್ಲಿ ಮಂಗಳವಾರ ಅಂತ್ಯಸಂಸ್ಕಾರವೊಂದರ ವೇಳೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆ.
ನಂಗರ್‌ಹಾರ್ ಪ್ರಾಂತದಲ್ಲಿ ಸ್ಥಳೀಯ ಪೊಲೀಸ್ ಕಮಾಂಡರ್ ಒಬ್ಬರ ಅಂತ್ಯಕ್ರಿಯೆಯ ವೇಳೆ ಸ್ಫೋಟ ಸಂಭವಿಸಿದೆ ಎಂದು ಪ್ರಾಂತದ ಗವರ್ನರ್‌ರ ವಕ್ತಾರರು ತಿಳಿಸಿದರು.
ದಾಳಿಯಲ್ಲಿ ಸುಮಾರು 40 ಮಂದಿ ಮೃತಪಟ್ಟಿದ್ದಾರೆ ಅಥವಾ ಗಾಯಗೊಂಡಿದ್ದಾರೆ ಎಂಬುದಾಗಿ ಆರಂಭಿಕ ವರದಿಗಳು ತಿಳಿಸಿವೆ ಎಂದು ಅವರು ಹೇಳಿದರು.