×
Ad

ಕ್ವಾರಂಟೈನ್: ಹೋಟಲ್ ಮಾಲಕರು, ಕಾರ್ಮಿಕರಿಗೆ ತರಬೇತಿ

Update: 2020-05-12 22:02 IST

ಉಡುಪಿ, ಮೇ 12:ಜಿಲ್ಲೆಗೆ ಹೊರರಾಜ್ಯ ಮತ್ತು ದೇಶಗಳಿಂದ ಬರುವವರನ್ನು ಜಿಲ್ಲೆಯ ವಿವಿಧ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಬೇಕಿದ್ದು, ಇದಕ್ಕಾಗಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರ ಸೂಚನೆಯಂತೆ ಜಿಲ್ಲೆಯ ಎಲ್ಲಾ ಹೋಟೆಲ್‌ಗಳ ಮಾಲಕರು ಮತ್ತು ಅಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಮಂಗಳವಾರ ಉಡುಪಿಯ ಪುರಭವನದಲ್ಲಿ ತರಬೇತಿ ನೀಡಲಾಯಿತು.

ಜಿಲ್ಲಾಡಳಿತದಿಂದ ಅನುಮತಿ ಪಡೆದು ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆಗಲು ಬರುವವವರಿಗೆ ಒದಗಿಸಬೇಕಾದ ಸೌಲಭ್ಯಗಳು, ಹೋಟೆಲ್‌ಗಳ ಮಾಲಕರು ಮತ್ತು ಸಿಬ್ಬಂದಿಗಳು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು, ಹೋಟೆಲ್‌ಗಳಲ್ಲಿ ಸ್ವಚ್ಛತೆ ಕಾಪಾಡುವ ವಿಧಾನಗಳು, ಸ್ಯಾನಿಟೈಸರ್ ಬಳಕೆ, ಸುರಕ್ಷತಾ ಅಂತರ ಕಾಯ್ದುಕೊಳ್ಳುವ ಕುರಿತು ವಿವರವಾದ ತರಬೇತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಕೋವಿಡ್-19ರ ಕುರಿತ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರೇಮಾನಂದ ಮತ್ತು ಡಾ.ದಿವ್ಯಾ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.

ಜಿಲ್ಲೆಯ ವಿವಿಧ ಹೋಟೆಲ್‌ಗಳ ಮಾಲಕರು ಮತ್ತು ಸಿಬ್ಬಂದಿಗಳು ತರಬೇತಿ ಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News