ಒಂದೇ ವಾರದಲ್ಲಿ ಮದ್ಯ ಮಾರಾಟದಿಂದ ರಾಜ್ಯ ಸರಕಾರಕ್ಕೆ 170 ಕೋಟಿ ರೂ. ಆದಾಯ

Update: 2020-05-12 19:16 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 12: ಲಾಕ್‍ಡೌನ್ ಸಡಿಲಿಕೆಯಿಂದಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆಯೇ ಒಂದು ವಾರದಲ್ಲಿ ರಾಜ್ಯ ಸರಕಾರದ ಬೊಕ್ಕಸಕ್ಕೆ 170 ಕೋಟಿ ರೂ.ಆದಾಯ ಬಂದಿದೆ.

ರಾಜ್ಯದಲ್ಲಿ ಮದ್ಯ ಮಾರಾಟದ ಬಗ್ಗೆ ಅಬಕಾರಿ ಸಚಿವ ಎಚ್.ನಾಗೇಶ್, ಸರಕಾರಕ್ಕೆ ವರದಿ ನೀಡಿದ್ದಾರೆ. ಕೇಂದ್ರ ಸರಕಾರದ ಲಾಕ್‍ಡೌನ್ ಆದೇಶದಲ್ಲಿ ಸ್ವಲ್ಪ ಸಡಿಲಿಕೆ ಮಾಡಿ, ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದರಿಂದ 1 ಸಾವಿರ ಕೋಟಿ ರೂ.ವಹಿವಾಟು ನಡೆದಿದೆ. ಅದರಲ್ಲಿ ರಾಜ್ಯ ಅಬಕಾರಿ ಇಲಾಖೆಗೆ ಶೇ.17ರಷ್ಟು ಲಾಭ ಅಂದರೆ 170 ಕೋಟಿ ರೂ. ಬಂದಿದೆ ಎಂದು ವರದಿಯಲ್ಲಿ ನಾಗೇಶ್ ಉಲ್ಲೇಖಿಸಿದ್ದಾರೆ.

ಸರಕಾರ ಈ ವರ್ಷದ ಬಜೆಟ್‍ನಲ್ಲಿ ಅಬಕಾರಿ ಸುಂಕ ಶೇ.6ರಷ್ಟು ಏರಿಕೆ ಮಾಡಿತ್ತು. ಬಳಿಕ ಲಾಕ್‍ಡೌನ್ ವೇಳೆ ಮದ್ಯ ಮಾರಾಟವನ್ನು ನಿಷೇಧಿಸಿತ್ತು. ಆನಂತರ ಲಾಕ್‍ಡೌನ್ ಆದೇಶದಲ್ಲಿ ಸ್ವಲ್ಪ ಸಡಿಲಿಕೆ ಮಾಡಿ, ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟ ಮೇಲೆ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ.

ಜೊತೆಗೆ ಹೆಚ್ಚುವರಿಯಾಗಿ ಶೇ.11ರಷ್ಟು ಅಬಕಾರಿ ಸುಂಕ ಏರಿಕೆ ಮಾಡಿರುವ ಪರಿಣಾಮ 1 ಸಾವಿರ ಕೋಟಿ ವಹಿವಾಟಿನಲ್ಲಿ ಶೇ.17ರಷ್ಟು ಲಾಭ ಬಂದಿದ್ದು, ಇಲಾಖೆಯ ಮೂಲಕ ಸರಕಾರದ ಖಜಾನೆಗೆ ಸೇರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News