ಬೆಳ್ತಂಗಡಿ ಬಿಲ್ಲವ ಸಂಘದಿಂದ ದಿನಸಿ ಸಾಮಗ್ರಿಗಳ ಕಿಟ್ ವಿತರಣೆ
Update: 2020-05-13 11:17 IST
ಬೆಳ್ತಂಗಡಿ, ಮೇ 13: ಕೊರೋನ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಬೆಳ್ತಂಗಡಿ ತಾಲೂಕಿನ ಬಿಲ್ಲವ ಸಮುದಾಯದ ಬಡ ಕುಟುಂಬಗಳಿಗೆ ಬೆಳ್ತಂಗಡಿ ಬಿಲ್ಲವ ಸಂಘದ ವತಿಯಿಂದ ಆಹಾರದ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ತಾಲೂಕಿನ ಏಳೂ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಅತ್ಯಂತ ಬಡವರಾಗಿರುವ ಎರಡು ಸಾವಿರ ಕುಟುಂಬಗಳನ್ನು ಗುರುತಿಸಿ ದಿನಸಿ ಕಿಟ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.
ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೆರಾಜೆ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಮನೋಹರ ಇಳಂತಿಲ ಸ್ವಾಗತಿಸಿದರು. ಕಾರ್ಯದರ್ಶಿ ನಾರಾಯಣ ಸುವರ್ಣ ವಂದಿಸಿದರು