×
Ad

ರಾಜ್ಯದಲ್ಲಿ ಮತ್ತೆ 26 ಮಂದಿಯಲ್ಲಿ ಕೊರೋನ ಸೋಂಕು: ಒಟ್ಟು ಸಂಖ್ಯೆ 951ಕ್ಕೆ ಏರಿಕೆ

Update: 2020-05-13 12:19 IST

ಬೆಂಗಳೂರು, ಮೇ 13: ರಾಜ್ಯದಲ್ಲಿ ಮತ್ತೆ 26 ಮಂದಿಯಲ್ಲಿ ಹೊಸದಾಗಿ ಕೊರೋನ ವೈರಸ್ ಸೋಂಕು ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಂಗಳವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯ ಅವಧಿಯಲ್ಲಿ 26 ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬುಲೆಟಿನ್ ತಿಳಿಸಿದೆ.

ಇದು ಸೋಂಕು ದೃಢಪಟ್ಟಿರುವ ಕಲಬುರಗಿಯ ಓರ್ವ ವ್ಯಕ್ತಿ ಮೇ 11ರಂದು ಮೃತಪಟ್ಟಿದ್ದಾರೆ. ಕಂಟೈನ್‌ಮೆಂಟ್ ರೆನ್ ವ್ಯಾಪ್ತಿಯ 60 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಆಸ್ಪತ್ರೆ ತಲುಪುವ ಮೊದಲೇ ಮೇ 11ರಂದು ಮೃತಪಟ್ಟಿದ್ದರು. ಅವರ ಗಂಟಲದ್ರವದ ಪರೀಕ್ಷಾ ವರದಿ ಇಂದು ಬಂದಿದ್ದು, ಕೋವಿಡ್-19 ಪಾಸಿಟಿವ್ ಆಗಿದೆ.

ಉಳಿದಂತೆ ಇಂದು ಬೀದರ್ ಜಿಲ್ಲೆಯಲ್ಲಿ ಅತ್ಯಧಿಕ ಅಂದರೆ 11 ಪ್ರಕರಣಗಳು ದೃಡಪಟ್ಟಿದೆ. ಇದರಲ್ಲಿ 17 ಮತ್ತು ಅದಕ್ಕಿಂತ ಕೆಳಗಿನ ವಯಸ್ಸಿನ ನಾಲ್ವರು ಸೇರಿದ್ದಾರೆ.

ಹಾಸನದಲ್ಲಿ 14 ವರ್ಷದ ಬಾಲಕಿ ಸಹಿತ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, ಉತ್ತರ ಕನ್ನಡದಲ್ಲಿ 2 ವರ್ಷದ ಮಗು ಸೇರಿದಂತೆ ಇಬ್ಬರಲ್ಲಿ ಕೊರೋನ ದೃಢಪಟ್ಟಿದೆ. ಉಳಿದಂತೆ ದಾವಣಗೆರೆ 2, ಕಲಬುರಗಿ 2, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬಳ್ಳಾರಿಯಲ್ಲಿ ತಲಾ ಓರ್ವರಲ್ಲಿ ಸೋಂಕು ಪತ್ತೆಯಾಗಿರುವುದಾಗಿ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ರಾಜ್ಯದ ಒಟ್ಟು ಸೋಂಕಿತರ ಪೈಕಿ 442 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 32 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News