×
Ad

ಸಿಇಟಿ-2020 ಪರಿಷ್ಕರಿಸಿದ ವೇಳಾಪಟ್ಟಿ ಪ್ರಕಟ

Update: 2020-05-13 21:06 IST

ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೋನ ವೈರಸ್(ಕೋವಿಡ್-19) ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರಾ ಕ್ರಮವಾಗಿ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಸ್ತುತ ರಾಜ್ಯ ಸರಕಾರದ ನಿರ್ದೇಶನದ ಅನ್ವಯ ರಾಜ್ಯ ಪರೀಕ್ಷಾ ಪ್ರಾಧಿಕಾರವು, ಮೊದಲನೆ ವರ್ಷದ, ಮೊದಲನೆ ಸೆಮಿಸ್ಟರ್ ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸುಗಳು ಮತ್ತು ಬಿ-ಫಾರ್ಮ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕಾಗಿ ಜು.30 ಮತ್ತು 31ರಂದು ಸಿಇಟಿ ಪರೀಕ್ಷೆಯನ್ನು ಈ ಕೆಳಗಿನ ಪರಿಷ್ಕೃತ ವೇಳಾಪಟ್ಟಿಯಂತೆ ನಡೆಸಲಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ- 2020ರ ಪರಿಷ್ಕೃತ ವೇಳಾಪಟ್ಟಿ: ಜು.30ರಂದು ಬೆಳಗ್ಗೆ 10.30 ರಿಂದ 11.50ರ ವರೆಗೆ ಜೀವಶಾಸ್ತ್ರ(60 ಅಂಕಗಳು), ಮಧ್ಯಾಹ್ನ 2.30 ರಿಂದ 3.50ರ ವರೆಗೆ ಗಣಿತ(60), ಜು.31ರಂದು ಬೆಳಗ್ಗೆ 10.30 ರಿಂದ 11.50ರ ವರೆಗೆ ಭೌತಶಾಸ್ತ್ರ(60 ಅಂಕಗಳು) ಹಾಗೂ ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನ ಶಾಸ್ತ್ರ(60 ಅಂಕಗಳು).

ಕನ್ನಡ ಭಾಷಾ ಪರೀಕ್ಷೆ(ಬೆಂಗಳೂರು ಕೇಂದ್ರದಲ್ಲಿ ಮಾತ್ರ). ಆ.1ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 12.30ರವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ(50 ಅಂಕಗಳು) ಪರೀಕ್ಷೆ ನಡೆಯಲಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ಗೆ ಭೇಟಿ ನೀಡಬಹುದಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News