ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಗೆ 5ನೇ ಬಲಿ

Update: 2020-05-14 07:03 GMT

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಸೋಂಕಿಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ.

ಮಂಗಳೂರು ಕುಲಶೇಖರ ನಿವಾಸಿ 80 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ನಗರದ ಕೋವಿಡ್ ಆಸ್ಪತ್ರೆಯಲ್ಲಿಂದು ಕೊನೆಯುಸಿರೆಳೆದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.  ಇದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟ ಎರಡನೆ ಪ್ರಕರಣವಾಗಿದೆ.

ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದರು ಈ ಮಹಿಳೆಗೆ ಎಪ್ರಿಲ್ 26ರಂದು ಕೊರೋನ ಸೋಂಕು ತಗುಲಿರುವುದು  ದೃಢಪಟ್ಟಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News