ವಿಮಾನ ನಿಲ್ದಾಣದಲ್ಲಿ ನಿರ್ಲಕ್ಷ: ವಿಮ್ ಆರೋಪ
ಮಂಗಳೂರು, ಮೇ 14: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿದೇಶದಲ್ಲಿ ಅತಂತ್ರರಾಗಿದ್ದ ಅನಿವಾಸಿ ಕನ್ನಡಿಗರುನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಬೇಕಿದ್ದ ದ.ಕ.ಜಿಲ್ಲಾಡಳಿತವು ಸಂಪೂರ್ಣ ನಿರ್ಲಕ್ಷ ತಾಳಿದೆ ಎಂದು ವಿಮೆನ್ ಇಂಡಿಯಾ ಮೂವ್‌ಮೆಂಟ್‌ನ ದ.ಕ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಆರೋಪಿಸಿದ್ದಾರೆ.
ಹಲವು ವರ್ಷಗಳಿಂದ ಸದಾ ಒಂದಿಲ್ಲೊಂದು ರೀತಿಯಲ್ಲಿ ವಿವಾದ ಮತ್ತು ಸಮಸ್ಯೆಯ ಕೇಂದ್ರ ಬಿಂದುವಾಗಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಅನಿವಾಸಿ ಕನ್ನಡಿಗರ ವಿರುದ್ಧ ಇಂತಹ ಸಂಕಷ್ಟದ ಸಂದರ್ಭದಲ್ಲಿ ಮತ್ತೊಮ್ಮೆ ನಿರ್ಲಕ್ಷ್ಯ ಧೋರಣೆ ತೋರಿ ಈ ನಿಲ್ದಾಣವು ಪ್ರಯಾಣಿಕರಿಗೆ ಸುರಕ್ಷತೆಯಲ್ಲ ಎಂಬುದನ್ನು ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಸಾಬೀತಿಪಡಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂತಹ ಗಂಭಿರ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸರಕಾರ ಕ್ರಮ ಕೈಗೊಂಡು ಮುಂದಿನ ದಿನಗಳಲ್ಲಿ ಆಗಮಿಸುವ ಅನಿವಾಸಿಗಳಿಗೆ ಸೂಕ್ತ ರೀತಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.