ದಾವಣಗೆರೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಮೂವರಿಗೆ ಕೊರೋನ ಸೋಂಕು

Update: 2020-05-14 17:36 GMT
ಸಾಂದರ್ಭಿಕ ಚಿತ್ರ

ದಾವಣಗೆರೆ, ಮೇ 14: ನಗರದ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಮೂವರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಕಂಟೈನ್ಮೆಂಟ್ ವಲಯದಲ್ಲಿ ಪೇದೆ ಕೆಲಸ ಮಾಡುತ್ತಿರುವುದರಿಂದ ಸೋಂಕಿತರ ಸಂಪರ್ಕದಿಂದ ಅವರಿಗೆ ಸೋಂಕು ತಗಲಿರಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪೊಲೀಸ್ ಕಾನ್‌ಸ್ಟೇಬಲ್‌ನೊಂದಿಗೆ ಸಂಪರ್ಕ ಹೊಂದಿದ್ದ ಕುಟುಂಬದ ಸದಸ್ಯರು ಹಾಗೂ ಸಂಬಂಧಪಟ್ಟ ಠಾಣಿಯ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿ ದೆ. ರೋಗಿ-852 56 ವರ್ಷದ ಮಹಿಳೆ ಸಂಪರ್ಕದಿಂದ 40ವರ್ಷದ ಪುರುಷನಿಗೆ ಸೋಂಕು ತಗಲಿದೆ ಹಾಗೂ ಶೀತಜ್ವರದಿಂದ ಬಳಲುತ್ತಿದ್ದ 32 ವರ್ಷದ ಯುವಕನಿಗೆ ಸೋಂಕು ದೃಢವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 88ಕ್ಕೇರಿದೆ. ಇಬ್ಬರು ಈಗಾಗಲೇ ಗುಣಮುಖರಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 82 ಪ್ರಕರಣಗಳು ಸಕ್ರಿಯವಾಗಿವೆ. ಸರಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News