ಕೊಪ್ಪಳ: ಕೊರೋನ ಸೋಂಕಿತೆ ಗರ್ಭಿಣಿಯ ಸಂಪರ್ಕಕ್ಕೆ ಬಂದಿದ್ದವರ ವರದಿ ನೆಗೆಟಿವ್

Update: 2020-05-15 11:35 GMT
ಸಾಂದರ್ಭಿಕ ಚಿತ್ರ

ಕೊಪ್ಪಳ, ಮೇ 15: ಬಾಗಲಕೋಟೆಯ ಗರ್ಭಿಣಿಗೆ ಕೊರೋನ ಸೋಂಕು ತಗುಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಕೊಪ್ಪಳ ಜಿಲ್ಲೆಯ ಜನರಿಗೆ ರಿಲೀಫ್ ಸಿಕ್ಕಿದೆ.

ಸೋಂಕಿತೆಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರ ಮೊದಲನೆ ಕೊರೋನ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದರೂ ಅವರನ್ನು ಕ್ವಾರಂಟೈನ್‍ನಲ್ಲಿರಿಸಿ, 2ನೆ ಬಾರಿ ಪರೀಕ್ಷೆಗೊಳಪಡಿಸಲಾಗಿತ್ತು. ಅದರ ವರದಿಯೂ ನೆಗೆಟಿವ್ ಬಂದಿದ್ದು, ನಿಟ್ಟುಸಿರು ಬಿಡುವಂತಾಗಿದೆ.

ಒಟ್ಟು 18 ಜನರ ಎರಡನೆ ಬಾರಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಕೊಪ್ಪಳ ಜಿಲ್ಲಾಡಳಿತ ಮೇ 16ರಂದು ಕ್ವಾರಂಟೈನ್ ಮುಕ್ತಗೊಳಿಸುವ ಸಾಧ್ಯತೆ ಇದೆ. 681ನೆ ಸೋಂಕಿತೆ ಜೊತೆ ಕುಷ್ಟಗಿ ತಾಲೂಕು ನಿಲೋಗಲ್ ಜನರು ಪ್ರಾಥಮಿಕ ಸಂಪರ್ಕ ಹೊಂದಿದ್ದರು.

ಆರೋಗ್ಯ ಇಲಾಖೆ ನಿಯಮದಂತೆ 2ನೆ ಬಾರಿಗೆ ಪರೀಕ್ಷೆಯ ಸ್ಯಾಂಪಲ್ ಕಳುಹಿಸಲಾಗಿತ್ತು. ಜಿಲ್ಲೆಯಿಂದ ಕಳುಹಿಸಿರುವ ಒಟ್ಟು 1,268 ವರದಿ ನೆಗೆಟಿವ್ ಬಂದಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನಿಲ್‍ ಕುಮಾರ್ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News