ಸಾಂತ್ವನ ಕೇಂದ್ರಗಳಿಗೆ ಬೀಗ ಜಡಿಯುವ ತೀರ್ಮಾನ: ಸರಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

Update: 2020-05-15 16:54 GMT

ಬೆಂಗಳೂರು, ಮೇ 15: ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರಕಾರ ಬೀಗ ಜಡಿಯಲು ಹೊರಟಿರುವುದು ಕೋವಿಡ್-19 ಸಂಕಷ್ಟದಲ್ಲಿದ್ದ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದ್ದು, ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿರುವ ಎಚ್‍ಡಿಕೆ ಅವರು, ಕಳೆದ 20 ವರ್ಷಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುವ ಕೆಲಸದಲ್ಲಿ ಮಗ್ನವಾಗಿದ್ದವು ಎಂದು ತಿಳಿಸಿದ್ದಾರೆ.

ಲಾಕ್‍ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News