ಪಡಿತರ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ದಾಳಿ: 40 ಟನ್ ಅಕ್ಕಿ ಜಪ್ತಿ
Update: 2020-05-15 23:08 IST
ಗದಗ, ಮೇ 15: ಅಪಾರ ಪ್ರಮಾಣದ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 40 ಟನ್ ಅಕ್ಕಿ ಜಪ್ತಿ ಮಾಡಿದ್ದಾರೆ.
ನಗರದ ಅಬ್ಬಿಗೇರಿ ಕಾಂಪೌಂಡ್, ತೀಸ್ ಬಿಲ್ಡಿಂಗ್ ಹಾಗೂ ನಿಸರ್ಗ ಬಡಾವಣೆಯಲ್ಲಿನ ಗೋಡೌನ್‍ಗಳಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದುಬಂದಿದೆ.
ಕಾನೂನು ಬಾಹಿರವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಎರಡು ಟಾಟಾ ಏಸ್ ವಾಹನ ಜಪ್ತಿ ಮಾಡಲಾಗಿದೆ. ಅಕ್ರಮ ಸಂಗ್ರಹಕಾರರ ವಿರುದ್ಧ ಅವಶ್ಯಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.