ಉತ್ತರ ಪ್ರದೇಶದಲ್ಲಿ ಕಾರ್ಮಿಕರ ಸಾವಿಗೆ ಪ್ರಧಾನಿ ಮೋದಿ ಸಂತಾಪ
Update: 2020-05-16 12:09 IST
ಹೊಸದಿಲ್ಲಿ, ಮೇ 16: ಲಕ್ನೋದಿಂದ 200 ಕಿ.ಮೀ.ದೂರದ ಔರೈಯಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ 24 ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸರಕಾರದ ಘಟನಾ ಸ್ಥಳದಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಮೃತ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸುವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
"ಉತ್ತರಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತ ಒಂದು ದಾರುಣ ಘಟನೆ. ಸರಕಾರ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.ಈ ಘಟನೆಯಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಸಂತಾಪ ಸೂಚಿಸುವೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ'' ಎಂದು ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಎರಡು ಟ್ರಕ್‌ಗಳ ಮಧ್ಯೆ ಇಂದು ಬೆಳಗ್ಗೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ 24 ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 38 ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 15 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ.