ರೌಡಿ ಶೀಟರ್ ಕೊಲೆ ಪ್ರಕರಣ: ಆರೋಪಿ ಬಂಧನ

Update: 2020-05-16 11:54 GMT

ಬೆಂಗಳೂರು, ಮೇ 16: ಕ್ಷುಲ್ಲಕ ಕಾರಣಕ್ಕೆ ರೌಡಿ ಮುಜಾಯಿದೀನ್ ಅನ್ನು ಕೊಲೆಗೈದ ಪ್ರಕರಣ ಸಂಬಂಧ ದೇವರಜೀವನಹಳ್ಳಿ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಕೆಜಿ ಹಳ್ಳಿಯ ಜಾಫರ್ ಬಂಧಿತ ಆರೋಪಿಯಾಗಿದ್ದು, ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.

ಮುಜಾಯಿದೀನ್ ಡಿಜೆ ಹಳ್ಳಿ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದಾನೆ. ಎರಡು ದಿನಗಳ ಹಿಂದೆ ಜಾಫರ್ ನೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳವನ್ನಾಡಿದ್ದು, ಕೋಪದಲ್ಲಿದ್ದ ಜಾಫರ್ ಜಾಕುವಿನಿಂದ ಮುಜಾಯಿದೀನ್ ಮೇಲೆ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಈ ಕೃತ್ಯ ಎಸಗಿದ್ದ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಸ್ಥಳಕ್ಕೆ ದೌಡಾಯಿದ ಡಿಜೆ ಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಪರಾರಿಯಾಗಿದ್ದ ಆರೋಪಿಯನ್ನು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News