ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಪಿಸ್ತೂಲಿನಿಂದ ಗುಂಡು ಹಾರಾಟ: ಆರು ಮಂದಿ ಬಂಧನ

Update: 2020-05-16 11:56 GMT

ಬೆಂಗಳೂರು, ಮೇ 16: ಜಯ ಕರ್ನಾಟಕ ಸಂಸ್ಥಾಪಕ, ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಆರೋಪದಡಿ ಆರು ಮಂದಿಯನ್ನು ಇಲ್ಲಿನ ಬಿಡದಿ ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ. 

ಮುತ್ತಪ್ಪ ರೈ ಖಾಸಗಿ ಗನ್‍ಮ್ಯಾನ್‍ ಗಳಾಗಿದ್ದ ಮೋನಪ್ಪ, ಗಿರೀಶ್, ಲಕ್ವಿರ್ ಸಿಂಗ್, ಚಾತರ್ ಸಿಂಗ್, ರಂಜಿತ್ ರೈ ಹಾಗೂ ಸುನಿಲ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಡದಿಯ ಮತ್ತಪ್ಪ ರೈ ನಿವಾಸದ ಸಮೀಪದಲ್ಲಿ ಶುಕ್ರವಾರ ಸಂಜೆ ನಡೆದ ಅಂತ್ಯಕ್ರಿಯೆ ಸಂದರ್ಭ ಆರೋಪಿಗಳು ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿ ಡಬಲ್ ಬ್ಯಾರಲ್ ಪಿಸ್ತೂಲುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಕಾನೂನು ಉಲ್ಲಂಘಿಸಿದ ಆರೋಪದ ಮೇಲೆ ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ಅವರನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News