ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ ಸಾಧ್ಯತೆ ?

Update: 2020-05-16 17:21 GMT

ಬೆಂಗಳೂರು, ಮೇ 16: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದ್ದು, ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ನೇಮಕ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರ ಪೊಲೀಸ್ ಆಯುಕ್ತ ಸ್ಥಾನಕ್ಕಾಗಿ ಹಲವು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಮುನ್ನೆಲೆಗೆ ಬಂದಿದ್ದು, ಈ ಪೈಕಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಹೆಸರು ಸಹ ಕೇಳಿಬರುತ್ತಿದೆ. ಇನ್ನು, ಅಮೃತ್ ಪೌಲ್ ಅವರು ನೇಮಕವಾಗುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಅಮೃತ್ ಪೌಲ್ ಅವರು ಪೊಲೀಸ್ ಇಲಾಖೆ ನೇಮಕಾತಿ ಮತ್ತು ತರಬೇತಿ ವಿಭಾಗದ ಎಡಿಜಿಪಿ ಆಗಿದ್ದು, ಶೀಘ್ರದಲ್ಲಿಯೇ ನಗರ ಪೊಲೀಸ್ ಆಯುಕ್ತ ನೇಮಕ ಆಗುವ ಅಧಿಕೃತ ಪ್ರಕಟಣೆ ಹೊರ ಬಿಳಲಿದೆ ಎನ್ನುವ ಮಾತುಗಳು  ಕೇಳಿಬಂದಿದೆ.

ಡಿಸಿಎಂ ಒತ್ತಡ?: ಲಾಕ್‍ಡೌನ್ ಸಂಬಂಧ ಸಂಚಾರ ಮತ್ತು ವ್ಯಾಪಾರ ವಹಿವಾಟು ಪಾಸ್ ವಿಷಯಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿಯೇ ಅಸಮಾಧಾನ ಹೊರಹಾಕಿದ್ದರು. ಈ ಕಾರಣಕ್ಕಾಗಿಯೇ ಅಧಿಕಾರಿಯ ವರ್ಗಾವಣೆಗೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News