ಕೋವಿಡ್-19 ಮಾಹಿತಿ ಸಂಗ್ರಹ: ಸಾರ್ವಜನಿಕರ ಸಹಕಾರಕ್ಕೆ ಪುತ್ತೂರು ತಹಶೀಲ್ದಾರ್ ಸೂಚನೆ

Update: 2020-05-17 06:22 GMT

ಪುತ್ತೂರು, ಮೇ 17: ಕೋವಿಡ್- 19 ವೈರಸ್ ಸೋಂಕು ಹರಡುವಿಕೆ ತಡೆಗಟ್ಟುವ ಸಂಬಂಧ ಆರೋಗ್ಯ ಇಲಾಖೆಯು ಆಶಾ ಕಾರ್ಯಕರ್ತೆಯವರ ಮೂಲಕ ಮನೆ- ಮನೆ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತ್ತಿದೆ. ಇದಕ್ಕೆ ಪೂರಕವಾಗಿ ಸರಕಾರದ ಆದೇಶದಂತೆ ‘ಮೊಬೈಲ್ ಹೆಲ್ತ್ ವಾಚ್ ಆ್ಯಪ್’ ಮೂಲಕ ಮಾಹಿತಿ ಸಂಗ್ರಹ ಮಾಡಲು ಎಲ್ಲ ಬೂತು ಮಟ್ಟದ ಅಧಿಕಾರಿಗಳು ಹಾಗೂ ಹೆಚ್ಚುವರಿ ಬೂತ್ ಮಟ್ಟದ ಅಧಿಕಾರಿಗಳನ್ನು, ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ತಹಶೀಲ್ದಾರ್ ರಮೇಶ್ ಬಾಬು ಟಿ. ಪ್ರಕಟನೆಯಲ್ಲಿ ಕೋರಿದ್ದಾರೆ.

ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಶಾಲಾ ಶಿಕ್ಷಕರು ಪ್ರತೀ ಮನೆಗೆ ಭೇಟಿ ನೀಡಿ ಸಾರ್ವಜನಿರ ಆರೋಗ್ಯ ಸಂಬಂಧ ವಿವರಗಳನ್ನು ’ಮೊಬೈಲ್ ಆ್ಯಪ್’ ಮೂಲಕ ಅಪ್‌ಲೋಡ್ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಮನೆಗೆ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡಿದಾಗ ಎಲ್ಲ ಸದಸ್ಯರ ವಿವರ ಮತ್ತು ಆರೋಗ್ಯದ ಮಾಹಿತಿಯನ್ನು ಕಡ್ಡಾಯವಾಗಿ ನೀಡುವಂತೆ ಸೂಚಿಸಿದೆ. ಈಗಾಗಲೇ ಕೆಲವು ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿ ಮತ್ತು ಹೆಚ್ಚುವರಿ ಬೂತ್ ಮಟ್ಟದ ಅಧಿಕಾರಿಗಳಿಗೆ ಕುಟುಂಬದ ಸದಸ್ಯರ ವಿವರ, ಆರೋಗ್ಯದ ಮಾಹಿತಿ ನೀಡದೆ ಸರಕಾರಿ ಕೆಲಸಕ್ಕೆ ಅಡ್ಡಿ ಮಾಡುತ್ತಿರುವುದು ತಾಲೂಕು ಆಡಳಿತದ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಪುತ್ತೂರು ತಾಲೂಕಿನ ನಾಗರಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ತಮ್ಮ ಮನೆಗೆ ಬೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ ಕುಟುಂಬದ ಎಲ್ಲ ಸದಸ್ಯರ ಮಾಹಿತಿ ಹಾಗೂ ಆರೋಗ್ಯದ ವಿವರಗಳ ಮಾಹಿತಿ ನೀಡಲು ನಿರಾಕರಿಸಿದಲ್ಲಿ ಅಥವಾ ಸರಕಾರಿ ಕೆಲಸಕ್ಕೆ ಅಡ್ಡಿಉಂಟು ಮಾಡುವುದು ಕಂಡುಬಂದಲ್ಲಿ ಬಾರತೀಯ ದಂಡ ಸಂಹಿತೆ ಸೆಕ್ಷನ್ 188, 269, 270 ರ ಪ್ರಕಾರ ಮತ್ತು ಕರ್ನಾಟಕ ರಾಜ್ಯ ಕೋವಿಡ್ -19 ಕಾಯ್ದೆ: 2020ರನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ತಾಲೂಕು ಆಡಳಿತ ವತಿಯಿಂದ ಸ್ಪಷ್ಟಪಡಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News