ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

Update: 2020-05-17 16:15 GMT

ಬ್ರಹ್ಮಾವರ, ಮೇ 17: ಲಾಕ್‌ಡೌನ್ ಸಂದರ್ಭ ಬೈಕಿನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಚಿಕ್ಕ ಮಗಳೂರು ಜಿಲ್ಲೆಯ ಕಡೂರು ಮೂಲದ ಹಾಗೂ ಪ್ರಸ್ತುತ ಮಾಬುಕಳ ನಿವಾಸಿ ಹೊನ್ನಪ್ಪ(34) ಎಂಬಾತನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಮೇ 1ರಂದು ಬ್ರಹ್ಮಾವರದ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕಾಪುವಿನ ಮಹಿಳೆಯನ್ನು ಈತ ತನ್ನ ಬೈಕಿನಲ್ಲಿ ಡ್ರಾಪ್ ಕೊಡುವು ದಾಗಿ ಹೇಳಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದನು. ಈ ಬಗ್ಗೆ ಸಿಸಿ ಕ್ಯಾಮೆರಾ ಫುಟೇಜ್‌ಗಳನ್ನು ಪರಿಶೀಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News