ಜೂ.25ರವರೆಗೆ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ

Update: 2020-05-17 16:44 GMT

ಬೆಂಗಳೂರು, ಮೇ 17: ಕಾಂಗ್ರೆಸ್ ಪಕ್ಷದ ಸೇವಾದಳ ಯಂಗ್ ಬ್ರಿಗೇಡ್ ವಿಭಾಗದ ಸದಸ್ಯತ್ವ ಅಭಿಯಾನವನ್ನು ರಾಜ್ಯ ವ್ಯಾಪ್ತಿಯಲ್ಲಿ ಆರಂಭ ಮಾಡಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು ಎಂದು ಬ್ರಿಗೇಡ್ ರಾಜ್ಯಾಧ್ಯಕ್ಷ ಝುನೈದ್ ಪಿ.ಕೆ. ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೂ.25ರವರೆಗೂ ಈ ಅಭಿಯಾನ ಜರುಗಲಿದ್ದು, ಕಾಂಗ್ರೆಸ್ ಮತ್ತು ಜಾತ್ಯತೀತ ವಿಚಾರಧಾರೆಗಳನ್ನು ಹೊಂದಿರುವ ಯುವಕರು ಬ್ರಿಗೇಡ್ ಸದಸ್ಯತ್ವವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.

ಯುವಕರು ಸಕ್ರಿಯ ರಾಜಕಾರಣ ಮತ್ತು ಮಾನವೀಯ ಸಿದ್ದಾಂತಗಳಲ್ಲಿ ತೊಡಗಬೇಕು ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಶಯದಂತೆ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಹೀಗಾಗಿ, ಪ್ರತಿ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಈ ಅಭಿಯಾನ ನಡೆಸಲಾಗುತ್ತಿದ್ದು, 18 ವರ್ಷ ಮೇಲ್ಪಟ್ಟ ಹಾಗೂ 38 ವರ್ಷದೊಳಗಿನ ಯುವಕರು ಮಾತ್ರ ಈ ಸದಸ್ಯತ್ವವನ್ನು ಪಡೆಯಬಹುದಾಗಿದೆ ಎಂದರು.

ಆನ್‍ಲೈನ್ ಮೂಲಕ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9611 140233 ಅನ್ನು ಸಂಪರ್ಕಿಸಬಹುದು ಎಂದು ಝುನೈದ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News