ಉಡುಪಿಯಲ್ಲಿ ಧಾರಾಕಾರ ಮಳೆ
Update: 2020-05-18 10:21 IST
ಉಡುಪಿ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಉಡುಪಿಯಲ್ಲಿ ಧಾರಾಕಾರ ಮಳೆಯಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು, ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿಯ ಬೈಂದೂರು, ಕಾಪು, ಕಾರ್ಕಳ ತಾಲೂಕಿನಲ್ಲಿ ಇಂದು ಮುಂಜಾನೆಯಿಂದ ಗುಡುಗು ಸಹಿತ ಮಳೆ ಸುರಿದಿದೆ.
ರಾಜ್ಯದ ಕೆಲವೆಡೆ ಭಾರೀ ಗಾಳಿ, ಮಳೆಯ ಮುನ್ಸೂಚನೆ ಇದ್ದು ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದಿಂದ ಮುನ್ನೆಚ್ಚರಿಕೆ ನೀಡಲಾಗಿದೆ.