ಉಡುಪಿ ನಗರದ ಚರಂಡಿ ಹೂಳೆತ್ತಲು ಬ್ಲಾಕ್ ಕಾಂಗ್ರೆಸ್ ಆಗ್ರಹ
ಉಡುಪಿ, ಮೇ 18: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಮಳೆ ಗಾಲದ ಪೂರ್ವಭಾವಿ ಮಳೆ ಪ್ರಾರಂಭವಾಗಿದ್ದು, ನಗರದ 35 ವಾರ್ಡ್‌ಗಳಲ್ಲಿ ಮಳೆ ನೀರು ಹರಿಯುವ ಚರಂಡಿಗಳಲ್ಲಿ ಹೂಳು ತೆಗೆಯುವ ಕಾಮಗಾರಿ ಇನ್ನೂ ಆರಂಭಿಸಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ದೂರಿದೆ.
ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಬಗ್ಗೆ ನಗರಸಭೆ ಅಧಿಕಾರಿಗಳು ಸಮರ್ಪಕವಾಗಿ ಉತ್ತರಿಸು ತ್ತಿಲ್ಲ. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಕೃತಕ ನೆರೆ ಉಂಟಾಗುವ ಸಾಧ್ಯತೆ ಇದೆ. ಈಗಾಗಲೇ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳ ಗಾದ ಜನರು ಕಷ್ಟ ನಷ್ಟಕ್ಕೊಳಗಾಗುವ ಸಾದ್ಯತೆ ಇರುವುದರಿಂದ ಕೂಡಲೇ ಚರಂಡಿಯ ಹೂಳೆತ್ತುವ ಹಾಗೂ ಅಪಾಯಕಾರಿ ಮರಗಳ ರೆಂಬೆ ಕಡಿಯುವ ಬಗ್ಗೆ ಸೂಕ್ತ ಕ್ರಮಗಳನ್ನು ತಕ್ಷಣ ತೆಗೆದುಕೊಳ್ಳಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ, ಸೆಲಿನ್ ಕರ್ಕಡ, ಅಮೃತಾ ಕೃಷ್ಣಮೂರ್ತಿ ಆಚಾರ್ಯ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.