ಕಾರ್ಮಿಕ ಕಾಯ್ದೆಗೆ ತಿದ್ದುಪಡಿಯ ಅವಸರದ ನಡೆಯ ಹಿಂದೆ ದುರುದ್ದೇಶದ ವಾಸನೆ: ಸಿದ್ದರಾಮಯ್ಯ

Update: 2020-05-18 14:17 GMT

ಬೆಂಗಳೂರು, ಮೇ 18: ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೊದಲು ಕಾರ್ಮಿಕ ಪ್ರತಿನಿಧಿಗಳ ಜೊತೆಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ಮಾತುಕತೆ ನಡೆಸಬೇಕು. ವಿಧಾನ ಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು. ಈಗಿನ ಅವಸರದ ನಡೆಯ ಹಿಂದೆ ದುರುದ್ದೇಶದ ವಾಸನೆ ಹೊಡೆಯುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಂಶಯ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಕೊರೋನ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಿಗಳಿಗೆ ನೆರವಾಗುವುದೆಂದರೆ ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲಿಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆಯೂ ಚುನಾಯಿತ ಸರಕಾರದ ಕರ್ತವ್ಯ ಎಂದು ಎಚ್ಚರಿಸಿದ್ದಾರೆ.

ಕಾರ್ಮಿಕ ಕಾಯ್ದೆಗಳಿಗೆ ಅವಸರದಲ್ಲಿ ಮತ್ತು ಏಕಪಕ್ಷೀಯವಾಗಿ ತಿದ್ದುಪಡಿ ತರಲು ಹೊರಟಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೋನ ಹಾವಳಿಯಿಂದಾಗಿ ಕಷ್ಟದಲ್ಲಿರುವ ಕಾರ್ಮಿಕರ ಗಾಯದ ಮೇಲೆ ಹಾಕಲು ಹೊರಟಂತಿದೆ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News