ಗುಜರಾತ್ ಸೇರಿ 4 ರಾಜ್ಯಗಳ ಜನರಿಗೆ ಪ್ರವೇಶವಿಲ್ಲ: ಬಿ.ಎಸ್.ಯಡಿಯೂರಪ್ಪ

Update: 2020-05-18 15:10 GMT

ಬೆಂಗಳೂರು, ಮೇ 18: ಕೊರೋನ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಲು ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ಆಗಮಿಸುವ ಜನರಿಗೆ ಮೇ 31ರವರೆಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

4ನೆ ಅವಧಿಯ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಹೊರ ರಾಜ್ಯಗಳ ಜನರಿಗೆ ತುಂಬಾ ಅನಿವಾರ್ಯ ಎನಿಸಿದರೆ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುವುದು. ಅಂಥವರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಬಂದವರನ್ನು ತಪಾಸಣೆ ಮಾಡಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ರಾಜ್ಯದ ಒಳಗೆ ರೈಲು ಸಂಚಾರಕ್ಕೆ ಅವಕಾಶ ನೀಡಲಾಗುವುದು. ಹೊರ ರಾಜ್ಯಗಳಿಗೆ ರೈಲಿನ ಓಡಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು. 

ಪ್ರತಿ ರವಿವಾರ ರಾಜ್ಯದ ಎಲ್ಲ ಕಡೆಗಳಲ್ಲೂ ಸಂಪೂರ್ಣ ಲಾಕ್‍ಡೌನ್ ಮಾಡಲಾಗುವುದು. ಯಾವುದೇ ಅಂಗಡಿ ಮುಂಗಟ್ಟು ತೆರೆಯುವಂತಿಲ್ಲ. ಆ ದಿನ ಎಲ್ಲರಿಗೂ ವಿಶ್ರಾಂತಿ ಎಂದು ತಿಳಿಸಬೇಕೆಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News