ರಾಜ್ಯ ಸರಕಾರದಿಂದ ಕನ್ನಡಿಗರ ನಿರ್ಲಕ್ಷ್ಯ: ಪ್ರಿಯಾಂಕ್ ಖರ್ಗೆ ಆರೋಪ

Update: 2020-05-18 17:32 GMT

ಬೆಂಗಳೂರು, ಮೇ 18: ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರು ಹೆಸರನ್ನು ನೋಂದಾಯಿಸಿಕೊಂಡಿದ್ದರೂ ಕರ್ನಾಟಕಕ್ಕೆ ಕರೆತರದೆ ಬಿಜೆಪಿ ಸರಕಾರ ಅವರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿ ಪರಿಗಣಿಸುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.    

ಸೋಮವಾರ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, ಕರ್ನಾಟಕದಿಂದ ಲಕ್ಷಾಂತರ ಕನ್ನಡಿಗರು ಬೇರೆ ರಾಜ್ಯಗಳಿಗೆ ಉದ್ಯೋಗದ ಸಲುವಾಗಿ ಹೋಗಿದ್ದಾರೆ. ಆದರೆ, ಸರಕಾರ ಅವರನ್ನು ರಾಜ್ಯಕ್ಕೆ ಕರೆತರುವಲ್ಲಿ ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಸರಕಾರ ಕೊರೋನ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಂದ ಮೇ 31ರವರೆಗೆ ಯಾರೂ ಬರದಂತೆ ಸೂಚನೆ ನೀಡಿದೆ. ಸರಕಾರದ ಈ ಕ್ರಮವನ್ನು ಪ್ರಿಯಾಂಕ್ ಖರ್ಗೆಯವರು ಖಂಡಿಸಿ ಟ್ವೀಟ್ ಮಾಡಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News