ದರೋಡೆಗೆ ಸಂಚು ಆರೋಪ: ರೌಡಿ ಸೇರಿ ಐವರ ಬಂಧನ

Update: 2020-05-19 11:51 GMT

ಬೆಂಗಳೂರು, ಮೇ 19: ಮಾರಕಾಸ್ತ್ರಗಳನ್ನು ಬಳಸಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಆರೋದಪಡಿ ರೌಡಿ ಸೇರಿ ಐವರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಸಂತೋಷ್ ಕುಮಾರ್ ಬಂಧಿತ ರೌಡಿಯಾಗಿದ್ದು, ಈತನ ವಿರುದ್ಧ ಎಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ಗಂಭೀರ ಅಪರಾಧ ಆರೋಪ ಪ್ರಕರಣಗಳು ದಾಖಲಾಗಿವೆ.

ಮತ್ತೋರ್ವ ಆರೋಪಿ ಶಶಿಕುಮಾರ್ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ, ತಲೆಮರೆಸಿಕೊಂಡಿರುವ ಆರೋಪ ಇದೆ. ಇನ್ನು ಭಾಸ್ಕರ್, ಸ್ಪೀಫನ್ ರಾಜ, ಆರ್.ಕುಮಾರ್ ವಿರುದ್ಧವು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಸೋಮವಾರ ಇಲ್ಲಿನ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜಯನಗರದ ಸ್ಮಶಾನ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಬಳಸಿಕೊಂಡು ಸಾರ್ವಜನಿಕರನ್ನು ಹೆದರಿಸಿ ದರೋಡೆಗೆ ಸಂಚು ರೂಪಿಸಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತರಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News