ಹೊಟೇಲ್ ಪುನರ್ ಆರಂಭಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧಾರ: ಸಿಎಂ ಯಡಿಯೂರಪ್ಪ

Update: 2020-05-19 16:14 GMT

ಬೆಂಗಳೂರು, ಮೇ 19: ಹೊಟೇಲ್ ಉದ್ಯಮವನ್ನು ಪುನರ್ ಆರಂಭಿಸುವ ನಿಟ್ಟಿನಲ್ಲಿ ಇನ್ನೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಗರದ ಹೊಟೇಲ್ ಮಾಲಕರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಹೊಟೇಲ್ ಉದ್ಯಮವನ್ನು ಪುನರ್ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಲಾಕ್‍ಡೌನ್‍ನಿಂದಾಗಿ ಹೊಟೇಲ್ ಉದ್ಯಮ ಭಾರಿ ಪ್ರಮಾಣದಲ್ಲಿ ನಷ್ಟ ಅನುಭವಿಸುತ್ತಿದ್ದು, ಕಾರ್ಮಿಕರಿಗೆ ವೇತನ ನೀಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ, ಹೊಟೇಲ್ ಉದ್ಯಮದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಸರಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಅವರು ಕೋರಿದರು.

ಹೊಟೇಲ್‍ಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು, ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಹೊಟೇಲ್ ಆರಂಭಿಸುತ್ತೇವೆ. ಇದಕ್ಕೆ ಸರಕಾರ ಅವಕಾಶ ಮಾಡಿಕೊಡಬೇಕು ಎಂದು ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟವಾದ ನಿರ್ಧಾರ ಪ್ರಕಟಿಸುತ್ತೇನೆ ಎಂದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News