ಖಾಸಗಿ ಬಸ್‍ಗಳ ತೆರಿಗೆ ವಿನಾಯಿತಿ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧಾರ: ಸಚಿವ ಲಕ್ಷ್ಮಣ ಸವದಿ

Update: 2020-05-19 14:43 GMT

ಬೆಂಗಳೂರು, ಮೇ 19: ಲಾಕ್‍ಡೌನ್‍ನಿಂದಾಗಿ ಕಳೆದ ಎರಡು ತಿಂಗಳಿನಿಂದ ಬಸ್‍ಗಳ ಓಡಾಟ ನಿಲ್ಲಿಸಿದ್ದರಿಂದ ತೆರಿಗೆ ವಿನಾಯಿತಿ ನೀಡಬೇಕು ಎಂದು ಖಾಸಗಿ ಬಸ್‍ಗಳ ಮಾಲಕರು ಬೇಡಿಕೆಯಿಟ್ಟಿದ್ದು, ಇನ್ನೆರಡು ದಿನಗಳಲ್ಲಿ ಪೂರಕವಾದ ನಿರ್ಧಾರಕ್ಕೆ ಬರಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಖಾಸಗಿ ಬಸ್‍ಗಳ ಮಾಲಕರ ತೆರಿಗೆ ವಿನಾಯಿತಿ ಮನವಿ ಕುರಿತು ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಬೇಡಿಕೆಗೆ ಪೂರಕವಾದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಬಸ್ ಸಂಚಾರಕ್ಕೆ ಇಂದಿನಿಂದ(ಮೇ 19) ಮುಕ್ತ ಅವಕಾಶ ನೀಡಲಾಗಿತ್ತು. ಅಲ್ಲದೆ, ಸರಕಾರದ ನಿಯಮ ಹಾಗೂ ಮಾರ್ಗಸೂಚಿ ಪಾಲಿಸುವುದು ಕಡ್ಡಾಯ ಮಾಡಲಾಗಿತ್ತು ಎಂದು ಸಚಿವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News