×
Ad

ರಾಜ್ಯದಲ್ಲಿ ಇಂದು 67 ಮಂದಿಗೆ ಕೊರೋನ ಸೋಂಕು ದೃಢ: ಸಾವಿನ ಸಂಖ್ಯೆ 41ಕ್ಕೆ ಏರಿಕೆ

Update: 2020-05-20 18:24 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 18: ರಾಜ್ಯದಲ್ಲಿ ಇಂದು ಒಂದೇ ದಿನ 67 ಕೊರೋನ ಪ್ರಕರಣಗಳು ಪಾಸಿಟಿವ್ ಬಂದಿದೆ ಮತ್ತು ಒಂದು ಸಾವು ಸಂಭವಿಸಿದೆ. ಈ ಮೂಲಕ ಕೊರೋನ ಸೋಂಕಿತರ ಸಂಖ್ಯೆ 1462ಕ್ಕೆ ಏರಿದ್ದು, ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ. 

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆವರೆಗಿನ ಅವಧಿಯಲ್ಲಿ 67 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಮಾಹಿತಿ ನೀಡಲಾಗಿದೆ.

ಈ ಪೈಕಿ ಹಾಸನ 21, ಬೀದರ್ 10, ಮಂಡ್ಯ 8, ಕಲಬುರಗಿ 7, ಉಡುಪಿ 6, ಬೆಂಗಳೂರು ನಗರ 4, ತುಮಕೂರು 4, ರಾಯಚೂರು 4 ಹಾಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಯಾದಗಿರಿಯಲ್ಲಿ ತಲಾ ಒಂದು ಪ್ರಕರಣ ಪಾಸಿಟಿವ್ ಬಂದಿದೆ.

ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಬೆಂಗಳೂರು ನಗರದ 43 ವರ್ಷದ ವ್ಯಕ್ತಿಯೊಬ್ಬರು ನಿಧನರಾಗಿದ್ದು, ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಟ್ಟಾರೆ 1462 ಸೋಂಕಿತರ ಪೈಕಿ 556 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41 ಮಂದಿ ಸಾವನ್ನಪ್ಪಿದ್ದು, 864 ಮಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News