ಮೇ 31 ರವರೆಗೆ ದ.ಕ.ಜಿಲ್ಲೆಯಲ್ಲಿ ಸೆ.144 (3) ಅನ್ವಯ ನಿಷೇಧಾಜ್ಞೆ
Update: 2020-05-20 18:24 IST
ಮಂಗಳೂರು, ಮೇ 20:ಕೊರೋನ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದ.ಕ. ಜಿಲ್ಲೆಯಾದ್ಯಂತ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4ರ ಅನ್ವಯ ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 31 ರವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.