×
Ad

ಕೋವಿಡ್-19 ಮಾದರಿ ಸಂಗ್ರಹಿಸುವ ಸಂಚಾರಿ ಘಟಕಕ್ಕೆ ಚಾಲನೆ

Update: 2020-05-20 18:35 IST

ಉಡುಪಿ, ಮೇ 20: ಕೋವಿಡ್-19ರ ಮಾದರಿಗಳನ್ನು ಸಂಗ್ರಹಿಸುವ ಸಂಚಾರಿ ಘಟಕಕ್ಕೆ ಕಾರ್ಕಳದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಲಾಯಿತು.

ಕಾರ್ಕಳ ತಾಲೂಕಿನ ವಿವಿಧ ಕ್ವಾರಂಟೈನ್ ಕೇಂದ್ರದಲ್ಲಿ ಹಾಗೂ ಹೋಮ್ ಕ್ವಾರಂಟೈನ್‌ನಲ್ಲಿರುವ ಗರ್ಭಿಣಿ, ಮಕ್ಕಳು, ವಯೋವೃದ್ದರು ಹಾಗೂ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಹಾಗೂ ಇನ್ನಿತರ ಶಂಕಿತ ವ್ಯಕ್ತಿಗಳಿಗೆ ಅನುಕೂಲವಾಗುವಂತೆ ಅವರ ಮನೆ ಬಾಗಿಲಲ್ಲೇ ಮಾದರಿ ಸಂಗ್ರಹಕ್ಕಾಗಿ ಈ ವಾಹನವನ್ನು ಬಳಸಲಾಗುವುದು.

ಕಾರ್ಕಳ ಶಾಸಕ ಹಾಗೂ ವಿಧಾನಸಭೆಯಲ್ಲಿ ಸರಕಾರದ ಮುಖ್ಯ ಸಚೇತಕ ರಾದ ಸುನೀಲ್ ಕುಮಾರ್ ಅವರು ವಾಹನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಜಿಲ್ಲೆಯ ದಾನಿಗಳು ಹಾಗೂ ಸರಕಾರಿ ನೌಕರರ ಸಂಘದ ಪ್ರಾಯೋಜಕತ್ವದಲ್ಲಿ ಈ ವಾಹನವನ್ನು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ನಿರ್ವಹಿಸಲಾಗುತ್ತದೆ.

ಈ ಸಂದರ್ಭದಲ್ಲಿ ಕಾರ್ಕಳದ ತಹಶೀಲ್ದಾರ್ ಪುರಂದರ ಹೆಗ್ಡೆ, ಹೆಬ್ರಿ ತಹಶೀಲ್ದಾರ್ ಮಹೇಶ್ಚಂದ್ರ, ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಉಡುಪಿ ಕರ್ನಾಟಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಸೇರಿಗಾರ್, ಉದ್ಯಮಿ ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ದುರ್ಗಾದ ವೈದ್ಯಾಧಿಕಾರಿ ಡಾ.ಪ್ರಕಾಶ್ ಕುಮಾರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News