ಪರೀಕ್ಷೆ ಇಲ್ಲದೆ ಎಸೆಸೆಲ್ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಕೋರಿ ಹೈಕೋರ್ಟ್ ಗೆ ಪಿಐಎಲ್

Update: 2020-05-20 14:50 GMT

ಬೆಂಗಳೂರು, ಮೇ 20: ಕೊರೋನ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸದೇ ಎಲ್ಲ ವಿದ್ಯಾರ್ಥಿಗಳೂ ಪಾಸ್ ಎಂದು ಘೋಷಿಸಲು ನಿರ್ದೇಶಿಸಬೇಕೆಂದು ಕೋರಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. 

ಮಾರ್ಚ್‍ನಲ್ಲಿ ನಡೆಯಬೇಕಿದ್ದ ಎಸೆಸೆಲ್ಸಿ ಪರೀಕ್ಷೆಯನ್ನು ಜೂನ್‍ನಲ್ಲಿ ನಡೆಸಲಾಗುತ್ತಿದ್ದು. ಈಗಾಗಲೇ ಎಸೆಸೆಲ್ಸಿ ಪರೀಕ್ಷೆಯ ವೇಳಾಪಟ್ಟಿ ಕೂಡ ಪ್ರಕಟವಾಗಿದೆ. ಆದರೆ, ಕೊರೋನ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೂ ಸೋಂಕು ತಗಲುವ ಸಾಧ್ಯತೆ ಇದೆ. ಹೀಗಾಗಿ, ಪರೀಕ್ಷೆಯನ್ನೇ ನಡೆಸದಂತೆ ನಿರ್ದೇಶಿಸಬೇಕೆಂದು ವಕೀಲ ಲೋಕೇಶ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಪಾಸ್ ಎಂದು ಘೋಷಿಸಿದರೆ ಕೊರೋನ ವೈರಸ್‍ಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News