×
Ad

ಅನಿವಾಸಿ ಕನ್ನಡಿಗರನ್ನು ಹೊತ್ತ ವಿಮಾನ ಮಸ್ಕತ್ ನಿಂದ ಮಂಗಳೂರಿಗೆ ಆಗಮನ

Update: 2020-05-20 21:22 IST

ಮಂಗಳೂರು : ಲಾಕ್ ಡೌನ್ ಬಳಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಸ್ಕತ್ ನಿಂದ ಮೊದಲ ವಿಮಾನ ಇಂದು ರಾತ್ರಿ ಬಂದಿಳಿಯಿತು. ಸುಮಾರು 63 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ಸಂಜೆ 8.05 ಕ್ಕೆ ಲ್ಯಾಂಡ್‌ ಆಯಿತು.

ಮಸ್ಕತ್ ನಿಂದ ಬೆಂಗಳೂರಿಗೆ ಆಗಮಿಸಿ, ಅಲ್ಲಿನ ಪ್ರಯಾಣಿಕರನ್ನು ಇಳಿಸಿದ ನಂತರ ಮಂಗಳೂರಿಗೆ ವಿಮಾನ ಆಗಮಿಸಿತು. ಪ್ರಯಾಣಿಕರಿಗೆ ಇಳಿದ ನಂತರ ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಯಿತು.

ನಂತರ ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪ್ರಯಾಣಿಕರಿಗೆ ಸ್ಟ್ಯಾಪಿಂಗ್ ಮಾಡಿ, ಇಮಿಗ್ರೇಷನ್ ಪ್ರಕ್ರಿಯೆ ನಡೆಸಲಾಯಿತು. ಪ್ರಯಾಣಿಕರಿಗೆ ಊಟದ ವ್ಯವಸ್ಥೆಯನ್ನೂ ಏರ್ಪಡಿಸಲಾಗಿದೆ. ನಂತರ ನಿಗದಿತ ಕ್ವಾರೆಂಟೈನ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಬಸ್ಸಿನ ವ್ಯವಸ್ಥೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News