ರಾಜ್ಯದಲ್ಲಿ ಕೊರೋನ ಪತ್ತೆ ಪರೀಕ್ಷಾ ಸಾಮರ್ಥ್ಯದಲ್ಲಿ ಹೆಚ್ಚಳ: ಸಚಿವ ಡಾ.ಸುಧಾಕರ್

Update: 2020-05-21 05:57 GMT

ಬೆಂಗಳೂರು, ಮೇ 21: ರಾಜ್ಯದಲ್ಲಿ ಕೊರೋನ ಸೋಂಕು ಪತ್ತೆಗೆ ಸಂಬಂಧಿಸಿ ನಡೆಸುತ್ತಿರುವ ಪರೀಕ್ಷಾ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ. ಬುಧವಾರ ಅತ್ಯಧಿಕ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ದಿನೇದಿನೆ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತ್ತಿರುವ ನಡುವೆಯೇ ಗುರುವಾರ ಸಚಿವ ಡಾ.ಸುಧಾಕರ್ ಈ ಹೇಳಿಕೆ ನೀಡಿದ್ದಾರೆ. ಬುಧವಾರ ಒಂದೇ ದಿನ 7,293 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ. ಇದು ಈವರೆಗಿನ ಅತ್ಯಧಿಕ ಏಕದಿನ ಪರೀಕ್ಷೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಸದ್ಯ 53 ಪರೀಕ್ಷಾ ಲ್ಯಾಬ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಮೇ ಅಂತ್ಯದ ವೇಳೆ 60 ಲ್ಯಾಬ್‌ಗಳನ್ನು ಹೊಂದುವ ಗುರಿಯನ್ನು ತಲುಪಲಾಗುವುದು ಎಂದವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News