×
Ad

ಉಡುಪಿ: 16 ಮಕ್ಕಳು ಸೇರಿ 27 ಮಂದಿಯಲ್ಲಿ ಕೊರೋನ ಪಾಸಿಟಿವ್

Update: 2020-05-21 13:14 IST

ಉಡುಪಿ, ಮೇ 21: ಜಿಲ್ಲೆಯ ಒಟ್ಟು 27 ಜನರಲ್ಲಿ ಗುರುವಾರದ ಬೆಳಗಿನ ವರದಿಯಲ್ಲಿ ಕೊರೋನ ಸೋಂಕು ಕಂಡುಬಂದಿದೆ. ಇವರೆಲ್ಲರೂ ಹೊರ ರಾಜ್ಯಗಳಿಂದ ಉಡುಪಿಗೆ ಆಗಮಿಸಿದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಇಂದು ಕೊರೋನಕ್ಕೆ ಪಾಸಿಟಿವ್ ಆದವರಲ್ಲಿ 16 ಮಂದಿ ಮಕ್ಕಳು ಸೇರಿದ್ದಾರೆ. ಉಳಿದಂತೆ ಆರು ಮಂದಿ ಪುರುಷರು ಹಾಗೂ ಐವರು ಮಹಿಳೆಯರು ಸೇರಿದ್ದಾರೆ. ಇವರಲ್ಲಿ ಮಹಾರಾಷ್ಟ್ರದಿಂದ ಬಂದವರು 23 ಮಂದಿಯಾದರೆ, ಮೂವರು ತೆಲಂಗಾಣದವರು. ಇನ್ನೊಬ್ಬರು ಕೇರಳದಿಂದ ಮಣಿಪಾಲದ ಕೆಎಂಸಿಗೆ ಚಿಕಿತ್ಸೆಗೆ ಬಂದಿದ್ದು, ಕೊರೋನ ಪರೀಕ್ಷೆ ನಡೆಸಿದಾಗ ಇವರಲ್ಲೂ ಸೋಂಕು ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಕೊರೋನ ಪಾಸಿಟಿವ್ ಬಂದ 27 ಮಂದಿಯಲ್ಲಿ 24 ಮಂದಿಯನ್ನು ಈಗ ಉಡುಪಿ ನಗರದಲ್ಲಿರುವ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿ ಸಲಾಗುತ್ತಿದೆ. ಕೇರಳದಿಂದ ಬಂದವರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲೇ ಐಸೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತದೆ ಎಂದು ಜಿ.ಜಗದೀಶ್ ತಿಳಿಸಿದರು.

ಉಡುಪಿ ಜಿಲ್ಲೆಯ ಇಬ್ಬರು ಶಿರಸಿಯಲ್ಲಿ ಕ್ವಾರಂಟೈನ್‌ನಲ್ಲಿದ್ದು, ಅವರಲ್ಲಿ ಕೊರೋನ ಸೋಂಕು ಪತ್ತೆಯಾಗಿರುವುದರಿಂದ ಅವರಿಬ್ಬರಿಗೂ ಕಾರವಾರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದೂ ಜಿಲ್ಲಾಧಿಕಾರಿ ತಿಳಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News