200ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಸ್ವಂತ ಗೆಸ್ಟ್ ಹೌಸ್‍ನಲ್ಲಿ ಆಶ್ರಯ ನೀಡಿದ ಸತೀಶ್ ಜಾರಕಿಹೊಳಿ

Update: 2020-05-21 11:49 GMT

ಬೆಳಗಾವಿ, ಮೇ 21: ಮುಂಬೈನಿಂದ ಬೆಳಗಾವಿ ಜೆಲ್ಲಿಗೆ ಬಂದ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಗೆಸ್ಟ್ ಹೌಸ್‍ನಲ್ಲೇ ಆಶ್ರಯ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.

ಕಾರ್ಮಿಕರನ್ನು ಯಾವುದೋ ಸರಕಾರಿ ಕಟ್ಟಡದಲ್ಲಿ ಇಟ್ಟು ಕ್ವಾರಂಟೈನ್ ಮಾಡುವ ಬದಲು ಸತೀಶ್ ಜಾರಕಿಹೊಳಿ ಅವರು ವಲಸೆ ಕಾರ್ಮಿಕರನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಲದಾಳ ಗ್ರಾಮದಲ್ಲಿರುವ ತಮ್ಮ ಗೆಸ್ಟ್ ಹೌಸ್‍ನಲ್ಲಿ ಕ್ವಾರಂಟೈನ್ ಮಾಡಿಸಿ ಮಾದರಿಯಾಗಿದ್ದಾರೆ.

ಮುಂಬೈನಿಂದ ತಮ್ಮ ಊರುಗಳಿಗೆ ಆಗಮಿಸಿದ ಯಮಕನಮರಡಿ ಕ್ಷೇತ್ರದ ವಲಸೆ ಕಾರ್ಮಿಕರನ್ನು ಕೊರೋನ ಭಯದಿಂದ ಗ್ರಾಮಸ್ಥರು ಊರಿನೊಳಗೆ ಸೇರಿಸಿಕೊಳ್ಳಲಿಲ್ಲ. ಕ್ವಾರಂಟೈನ್‍ನಲ್ಲಿ ವ್ಯವಸ್ಥೆಯೂ ಆಗಿರಲಿಲ್ಲ. ಇಂಥ ಸಂದರ್ಭದಲ್ಲಿ ವಲಸೆ ಕಾರ್ಮಿಕರು ತನ್ನ ಕ್ಷೇತ್ರದವರು ಎಂದು ಅರಿತ ಸತೀಶ್ ಜಾರಕಿಹೊಳಿ, ಸುಮಾರು 200ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಉಳಿದುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ತಮ್ಮ ಸಹಾಯಕ್ಕೆ ನಿಂತಿರುವ ಸತೀಶ್ ಜಾರಕಿಹೊಳಿ ಸೇವೆಗೆ ಕಾರ್ಮಿಕರು ಸಂತಸ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News