13 ಸೊನ್ನೆಗಳಲ್ಲಿ ಯಾರಿಗೆ ಯಾವ 'ಸೊನ್ನೆ' ಸಿಗಲಿದೆ ?: ವಿಶೇಷ ಪ್ಯಾಕೇಜ್ ಬಗ್ಗೆ ಸಿದ್ದರಾಮಯ್ಯ

Update: 2020-05-21 15:15 GMT

ಬೆಂಗಳೂರು, ಮೇ 21: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೊರೋನ ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಪ್ರಕಟಿಸಿರುವ 20 ಲಕ್ಷ ಕೋಟಿ ರೂಪಾಯಿಗಳಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ 'ಸೊನ್ನೆ' ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಗುರುವಾರ ಟ್ವೀಟ್ ಮಾಡಿರುವ ಅವರು, `ಅಪ್ಪಟ ಸುಳ್ಳು, ಅತಿರಂಜಿತ ವಿಷಯಗಳನ್ನೇ ಮುಂದಿಟ್ಟುಕೊಂಡು ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ ನರೇಂದ್ರ ಮೋದಿ ಅವರ ಕೊರೋನ ಪರಿಹಾರದ ಪ್ಯಾಕೇಜ್ ನಮ್ಮ ಮುಂದಿದೆ. ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆ' ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಪ್ಪತ್ತೊಂದನೆ ಶತಮಾನಕ್ಕಾಗಿ ಭಾರತವನ್ನು ಕಟ್ಟುವ ಕನಸನ್ನು, ದೂರದೃಷ್ಟಿಯ ವೈಜ್ಞಾನಿಕ, ವೈಚಾರಿಕ ಚಿಂತನೆಯ ಯೋಜನೆಗಳಿಂದ ನನಸಾಗಿಸಿದ್ದು ರಾಜೀವ್ ಗಾಂಧಿ. ಮತದಾನದ ವಯಸ್ಸನ್ನು 18ಕ್ಕೆ ಇಳಿಸಿದ ಅವರ ಕಾಳಜಿಭರಿತ ಮುನ್ನೋಟ ಇಂದಿನ ಯುವ ಭಾರತಕ್ಕೆ ಕೊಡುಗೆ. ಅವರ ಸಾಧನೆ, ತ್ಯಾಗ, ಬಲಿದಾನಕ್ಕೆ ನನ್ನ ಗೌರವ ನಮನ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಬಲಿದಾನದ ದಿನವನ್ನು ಸ್ಮರಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News