ಬಡ ದೇಶಗಳಲ್ಲಿ ಕೊರೋನ ವೈರಸ್ ಪ್ರಕರಣಗಳ ಹೆಚ್ಚಳ: ವಿಶ್ವ ಆರೋಗ್ಯ ಸಂಸ್ಥೆ ಕಳವಳ

Update: 2020-05-21 16:08 GMT

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಮೇ 21: ಬಡ ದೇಶಗಳಲ್ಲಿ ಕೊರೋನ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಬುಧವಾರ ಕಳವಳ ವ್ಯಕ್ತಪಡಿಸಿದೆ.

ಕಳೆದ 24 ಗಂಟೆಗಳಲ್ಲಿ 1,06,000 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಾಂಕ್ರಾಮಿಕ ಸ್ಫೋಟಗೊಂಡಂದಿನಿಂದ ಒಂದೇ ದಿನದಲ್ಲಿ ಇಷ್ಟೊಂದು ಸಂಖ್ಯೆಯ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಅದು ಹೇಳಿದೆ.

ಈ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ನಾವು ಇನ್ನೂ ಸಾಕಷ್ಟು ದೂರ ಹೋಗಬೇಕಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡುತ್ತಾ ನುಡಿದರು. ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ಹೆಚ್ಚುತ್ತಿರುವ ಕೊರೋನ ವೈರಸ್ ಪ್ರಕರಣಗಳ ಬಗ್ಗೆ ನಾವು ಭಾರೀ ಕಳವಳ ಹೊಂದಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ತುರ್ತು ಕಾರ್ಯಕ್ರಮಗಳ ಮುಖ್ಯಸ್ಥ ಡಾ. ಮೈಕ್ ರಯಾನ್, 50 ಲಕ್ಷ ಸೋಂಕು ಪ್ರಕರಣಗಳ ದುರಂತ ಮೈಲಿಗಲ್ಲನ್ನು ನಾವು ಶೀಘ್ರದಲ್ಲೇ ತಲುಪುತ್ತೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News