ಸೋನಿಯ ಗಾಂಧಿ ವಿರುದ್ಧ ಎಫ್ಐಆರ್: ಎಸ್ಸೈ ಅಮಾನತಿಗೆ ಆಗ್ರಹಿಸಿ ಎಸ್ಪಿಗೆ ಕಾಂಗ್ರೆಸ್ ಮನವಿ

Update: 2020-05-21 17:01 GMT

ಶಿವಮೊಗ್ಗ, ಮೇ 21: ಸುಳ್ಳು ದೂರು ದಾಖಲಿಸಿಕೊಂಡಿರುವ ಜಿಲ್ಲೆಯ ಸಾಗರಪೇಟೆ ಠಾಣೆ ಎಸ್ಸೈ ವಿರುದ್ಧ ಕ್ರಮ ಕೈಗೊಂಡು, ಅವರನ್ನು ಅಮಾನತು ಪಡಿಸುವಂತೆ ಆಗ್ರಹಿಸಿ ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರಮುಖರ ನಿಯೋಗ ಎಸ್ಪಿಗೆ ಮನವಿ ಸಲ್ಲಿಸಲಾಯಿತು. 

ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ವಿರುದ್ಧ ಸುಳ್ಳು ದೂರು ನೀಡಿದ್ದ ಸಾಗರದ ವಕೀಲ ಕೆ.ಎ ಪ್ರವೀಣ್ ಕುಮಾರ್ ಅವರ ಅರ್ಜಿಯನ್ನು ಪುರಸ್ಕರಿಸಿದ ಸಾಗರದ ಪೇಟೆ ಪೊಲೀಸ್ ಠಾಣೆ ಸಿಪಿಐ ಮಹೇಶ್ವರ ನಾಯ್ಕ ಅವರ ವಿರುದ್ಧ ಕ್ರಮ ಕೈಗೊಂಡು ಕರ್ತವ್ಯದಿಂದ ತಕ್ಷಣ ಅಮಾನತು ಪಡಿಸಬೇಕೆಂದರು.

ದಿಲ್ಲಿಯ ಐಎನ್‌ಸಿ ಕಚೇರಿಯಿಂದ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಬಿಡುಗಡೆ ಆಗಿದೆ ಎನ್ನಲಾದ ಸುದ್ದಿಯನ್ನು ತಿರುಚಿರುವ ವಕೀಲ ಕೆ.ವಿ.ಪ್ರವೀಣ್ ಕುಮಾರ್, ನೈಜ ಸುದ್ದಿಗೆ ಮತ್ತಷ್ಟು ಸುಳ್ಳು ಅಂಶಗಳನ್ನು ಸೇರಿಸಿ ನೀಡಿರುವ ದೂರನ್ನು ಯಾವುದೇ ಹಂತದಲ್ಲಿ ಪರಿಶೀಲನೆ ನಡೆಸಿದಂತಿಲ್ಲ ಎಂದು ದೂರಿದರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಮುಖರ ನಿಯೋಗ ಮನವಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News