'ಅಂಫಾನ್’ ಚಂಡಮಾರುತ: 1,000 ಕೋಟಿ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Update: 2020-05-22 08:04 GMT

ಹೊಸದಿಲ್ಲಿ: ‘ಅಂಫಾನ್’ ಚಂಡಮಾರುತದಿಂದ ತತ್ತರಿಸಿ ಹೋಗಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ಮೋದಿ 1000 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳದ ಚಂಡಮಾರುತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಅವರು ಈ ಪರಿಹಾರವನ್ನು ಘೋಷಿಸಿದರು.

 ಸಿಎಂ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗದೀಪ್ ಧಂಖರ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಧಾನಿಯವರನ್ನು ಸ್ವಾಗತಿಸಿದರು.ಪ್ರಧಾನಿ ಮೋದಿ ಅವರು ಸಿಎಂ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗದೀಪ್ ಧಂಖರ್ ಜೊತೆಗೆ ಹೆಚ್ಚು ಹಾನಿಗೀಡಾಗಿರುವ ದಕ್ಷಿಣ ಬಂಗಾಳದಲ್ಲಿ ಹೆಲಿಕಾಪ್ಟರ್ನೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಿದರು..

ಪ್ರಧಾನಿ ಮೂರು ತಿಂಗಳ ಬಳಿಕ ಇದೇ ಮೊದಲ ಬಾರಿ ದಿಲ್ಲಿಯಿಂದ ಹೊರಗೆ ಪ್ರಯಾಣಿಸಿದ್ದಾರೆ. ಪ್ರಧಾನಿ ಫೆ.29ರಂದು ಉತ್ತರ ಪ್ರದೇಶದ ಚಿತ್ರಕೂಟ ಹಾಗೂ ಪ್ರಯಾಗ್‌ರಾಜ್‌ಗೆ ತೆರಳಿದ ಬಳಿಕ ಕೊರೋನ ವೈರಸ್‌ನಿಂದಾಗಿ ಉಂಟಾಗಿರುವ ಲಾಕ್‌ಡೌನ್‌ನಿಂದಾಗಿ ದಿಲ್ಲಿಯಲ್ಲೇ ಉಳಿದುಕೊಂಡಿದ್ದರು.

ಬುಧವಾರ ಬೀಸಿದ ಭೀಕರ ಚಂಡಮಾರುತಕ್ಕೆ 72 ಜನರು ಸಾವನ್ನಪ್ಪಿದ್ದರು. ಪ್ರಧಾನಿ ಪರಿಸ್ಥಿತಿಯ ಬಗ್ಗೆ ತಿಳಿದುಕೊಳ್ಳಲು ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚಂಡಮಾರುತದಿಂದ ಪೀಡಿತವಾಗಿರುವ ಸ್ಥಳಗಳಿಗೆ ತೆರಳುವಂತೆ ಪ್ರಧಾನಿಗೆ ಮನವಿ ಮಾಡಿದರು. ಚಂಡಮಾರುತವನ್ನು ರಾಷ್ಟ್ರೀಯ ಆಪತ್ತು ಎಂದು ಪರಿಗಣಿಸಬೇಕೆಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News