ರಾಜ್ಯದಲ್ಲಿ ಒಂದೇ ದಿನ 138 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆ

Update: 2020-05-22 12:34 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 18: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಂದು ಒಂದೇ ದಿನ ಒಟ್ಟು 138 ಪ್ರಕರಣಗಳು ಪಾಸಿಟಿವ್ ಬಂದಿವೆ. ಈ ಮೂಲಕ ಕೊರೋನ ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆಯಾಗಿದೆ.

ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5 ಗಂಟೆಯ ವರೆಗಿನ ಅವಧಿಯಲ್ಲಿ 138 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ. 

ಈ ಪೈಕಿ ಅತೀ ಹೆಚ್ಚು ಪ್ರಕರಣಗಳು ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿದ್ದು, ಇಲ್ಲಿ ಒಟ್ಟು 47 ಪ್ರಕರಣಗಳು ಪಾಸಿಟಿವ್ ಬಂದಿವೆ ಇನ್ನುಳಿದಂತೆ, ಹಾಸನದಲ್ಲಿ 14, ರಾಯಚೂರು 10, ಬೀದರ್ 9, ಮಂಡ್ಯ 8, ತುಮಕೂರು 8, ವಿಜಯಪುರ 7, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 5, ಚಿಕ್ಕಮಗಳೂರು 5, ದಾವಣಗೆರೆ 3, ಹಾವೇರಿ 3, ಉಡುಪಿ 3, ಶಿವಮೊಗ್ಗ, ಧಾರವಾಡ, ಯಾದಗಿರಿಯಲ್ಲಿ ತಲಾ 2, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗದಲ್ಲಿ ತಲಾ ಒಂದೊಂದು ಪ್ರಕರಣ ದೃಢಪಟ್ಟಿದೆ.

ರಾಜ್ಯದಲ್ಲಿ ಒಟ್ಟಾರೆ 1,743 ಸೋಂಕಿತರ ಪೈಕಿ 597 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41 ಮಂದಿ ಸಾವನ್ನಪ್ಪಿದ್ದಾರೆ. ಉಳಿದ 1104 ಮಂದಿಯನ್ನು ಆಯಾ ಜಿಲ್ಲಾ ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಎಂದು ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News