ರಾಜ್ಯದ ಹೊಸ ತಾಲೂಕುಗಳಿಗೆ ಆಡಳಿತಾಧಿಕಾರಿಗಳ ನೇಮಕ

Update: 2020-05-22 16:24 GMT

ಬೆಂಗಳೂರು, ಮೇ 22: ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ ತಾಲೂಕು ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

ಶುಕ್ರವಾರ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ಸಿ.ಮಂಜೂರ್, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲೂಕು ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಿಸುವ ಸಂಬಂಧ ರಾಜ್ಯಪತ್ರ ಪ್ರಕಟಿಸಿದ್ದು, ಜಿ.ಪಂ. ಸಿಇಓಗಳಿಗೆ ಕಳುಹಿಸಿಕೊಡಲಾಗಿದೆ.

ಹೊಸ ತಾಲೂಕುಗಳ ಪಟ್ಟಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ, ಕಡಬ ತಾಲೂಕು ಪಂಚಾಯತ್ ಗಳಿಗೆ ದಕ್ಷಿಣ ಕನ್ನಡ ಜಿ.ಪಂ. ಉಪ ಕಾರ್ಯದರ್ಶಿ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ, ಕಾಪು, ಬೈಂದೂರು ಹಾಗೂ ಹೆಬ್ರಿ ತಾಲೂಕು ಪಂಚಾಯತ್ ಗಳಿಗೆ ಉಡುಪಿ ಜಿ.ಪಂ. ಉಪ ಕಾರ್ಯದರ್ಶಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಬೆಂಗಳೂರು ನಗರ ಯಲಹಂಕ ತಾಲೂಕು ಪಂಚಾಯತ್ ಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್, ಬೆಂಗಳೂರು ನಗರ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ, ಚಿಕ್ಕಮಗಳೂರು ಇವರನ್ನು ಆಡಳಿತಾಧಿಕಾರಿಯನ್ನಾ ನಿಯೋಜಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕು ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕು ಪಂಚಾಯತ್ ಗೆ ಜಿ.ಪಂ. ಉಪ ಕಾರ್ಯದರ್ಶಿ, ಕೋಲಾರ ಇವರನ್ನು, ಮೈಸೂರು ಜಿಲ್ಲೆ-ಸರಗೂರು ತಾಲೂಕು ಪಂಚಾಯತ್ ಗೆ ಜಿ.ಪಂ. ಉಪ ಕಾರ್ಯದರ್ಶಿ, ಮೈಸೂರು ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News