ಕೊರೋನ ವೈರಸ್: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 2 ಪಾಸಿಟಿವ್, 24 ನೆಗೆಟಿವ್

Update: 2020-05-22 16:32 GMT

ಮಂಗಳೂರು, ಮೇ 22: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಶುಕ್ರವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 26 ವರದಿಗಳ ಪೈಕಿ 2 ಪಾಸಿಟಿವ್ ಮತ್ತು 24 ನೆಗೆಟಿವ್ ಆಗಿದೆ. ಇನ್ನೂ 580 ಮಂದಿಯ ವರದಿ ಬರಲು ಬಾಕಿ ಇದೆ. ಶುಕ್ರವಾರ 198 ಮಂದಿಯ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಅಲ್ಲದೆ 84 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಇದರೊಂದಿಗೆ ಈವರೆಗೆ 41,849 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಜ್ವರ ಕ್ಲಿನಿಕ್‌ಗಳಲ್ಲಿ 3,840 ಮಂದಿ ಮತ್ತು ಸಂಚಾರ ಕ್ಲಿನಿಕ್‌ನಲ್ಲಿ 92 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಸುರತ್ಕಲ್‌ನ ಎಎನ್‌ಐಟಿಕೆಯಲ್ಲಿ 22 ಮತ್ತು ಕದ್ರಿಯ ಇಎಸ್‌ಐ ಆಸ್ಪತ್ರೆಯಲ್ಲಿ 18 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ.

►ಈವರೆಗೆ 6,251 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 5,671 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 5,609 ಮಂದಿಯ ವರದಿಯು ನೆಗೆಟಿವ್ ಮತ್ತು 63 ಮಂದಿಯ ವರದಿಯು ಪಾಸಿಟಿವ್ ಬಂದಿದೆ.

►ಈವರೆಗೆ ಪತ್ತೆಯಾದ 63 ಪಾಸಿಟಿವ್‌ಗಳ ಪೈಕಿ 21 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ 36 ಮಂದಿ ಕೋವಿಡ್-ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎ.19ರಂದು ಮಹಿಳೆ ಮತ್ತು ಎ.23 ಹಾಗೂ ಎ.30ರಂದು ಇಬ್ಬರು ವೃದ್ಧೆಯರು, ಮೇ 13ರಂದು ಮಹಿಳೆ, ಮೇ 14ರಂದು ವೃದ್ಧೆ ಸಹಿತ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ. ಮೇ 21ರಂದು 55 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಬಂದ ಅವರ ಗಂಟಲ ದ್ರವದ ಪರೀಕ್ಷೆಯಲ್ಲಿ ಕೊರೋನ ಪಾಸಿಟಿವ್ ಪಾಸಿಟಿವ್ ಕಂಡು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News