ಬೆಂಗಳೂರು: ಆದೇಶ ಉಲ್ಲಂಘಿಸಿದ 163 ಶಾಲೆಗಳಿಗೆ ಶಿಕ್ಷಣ ಇಲಾಖೆ ನೋಟಿಸ್

Update: 2020-05-23 12:39 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 23: ಲಾಕ್‍ಡೌನ್ ಸಮಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ನಡೆಸದಂತೆ ಹಾಗೂ ಪೋಷಕರಿಂದ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿದ 163 ಶಾಲೆಗಳಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಲಾಗಿದೆ.

ನಗರದ ವಿವಿಧ ಶಾಲೆಗಳಿಗೆ 10 ದಿನಗಳಿಂದ ನೋಟಿಸ್ ನೀಡಲಾಗಿದೆ. ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಿಂದ 710 ದೂರುಗಳು ದಾಖಲಾಗಿದ್ದು, ಈ ಪೈಕಿ 116 ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ಬೆಂಗಳೂರು ಉತ್ತರದಿಂದ 113 ದೂರುಗಳು ದಾಖಲಾಗಿದ್ದು, ಅವುಗಳಲ್ಲಿ 45 ಶಾಲೆಗಳಿಗೆ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 6 ದೂರುಗಳು ದಾಖಲಾಗಿದ್ದು, ಎರಡು ಶಾಲೆಗಳಿಗೆ ನೊಟೀಸ್ ನೀಡಲಾಗಿದೆ.

ನಗರದಲ್ಲಿ ಒಟ್ಟಾರೆ 829 ದೂರುಗಳ ಪೈಕಿ 163 ಶಾಲೆಗಳಿಗೆ ದೂರು ನೀಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಇಲ್ಲಿಯವರೆಗೂ 370 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ಶಾಲಾ ಆಡಳಿತ ಮಂಡಳಿಗಳು ಶುಲ್ಕ ವಸೂಲಿ, ಶುಲ್ಕ ಹೆಚ್ಚಳ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ನಡೆಯುವ ಪ್ರಕರಣಗಳು ಕಂಡುಬಂದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸಹಾಯವಾಣಿ ಸಂಖ್ಯೆ 080-2490025 ಅಥವಾ ಉಚಿತ ಸಹಾಯವಾಣಿ ಸಂಖ್ಯೆ 1800 425 11035 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News