ವಿದೇಶದಿಂದ 657 ಮಂದಿ ಬೆಂಗಳೂರಿಗೆ ಆಗಮನ

Update: 2020-05-23 13:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 23: ವಿದೇಶಗಳಲ್ಲಿ ನೆಲೆಸಿದ್ದ 656 ಮಂದಿ ಭಾರತೀಯರು ಶುಕ್ರವಾರ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನ ಜಾವದವರೆಗೆ ಬೇರೆ ಬೇರೆ ವಿಮಾನಗಳ ಮೂಲಕ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಕಾರ್ತದಿಂದ 214, ಮಾಲಿಯಿಂದ 152, ದೋಹಾದಿಂದ 182 ಹಾಗೂ ಕೌಲಾಲಂಪೂರ್ ನಿಂದ 108 ಪ್ರಯಾಣಿಕರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಇಂಡೋನೇಷ್ಯಾದ ಜರ್ಕಾತದಿಂದ ಇಂದು ಬೆಳಗಿನ ಜಾವ 1.40 ಗಂಟೆಗೆ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೆರಡನೆಯ ವಿಮಾನದಲ್ಲಿ 214 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಮಾಲ್ಡೀವ್ಸ್ ನ ಮಾಲಿಯಿಂದ ಶುಕ್ರವಾರ ರಾತ್ರಿ 6.50 ಗಂಟೆಗೆ ಒಟ್ಟು 152 ಮಂದಿ ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ ಒಂದು ಮಗು ಸೇರಿದಂತೆ 132 ಪುರುಷರು ಮತ್ತು 20 ಮಹಿಳೆಯರು ಆಗಮಿಸಿದ್ದಾರೆ. ಕತಾರ್ ನ ದೋಹಾದಿಂದ ಶುಕ್ರವಾರ ರಾತ್ರಿ 9 ಒಟ್ಟು 182 ಮಂದಿ ಪ್ರಯಾಣಿಕರಲ್ಲಿ ಹತ್ತು ವರ್ಷದೊಳಗಿನ 16 ಮಕ್ಕಳು, 127 ಪುರುಷರು ಮತ್ತು 39 ಮಹಿಳೆಯರು ಆಗಮಿಸಿದ್ದಾರೆ. ಮಲೇಷ್ಯಾದ ಕೌಲಾಲಂಪುರ್ ನಿಂದ ಶನಿವಾರ ರಾತ್ರಿ 9.30 ಗಂಟೆಗೆ ಬಂದಿಳಿದ ಒಟ್ಟು 108 ಮಂದಿ ಪ್ರಯಾಣಿಕರಲ್ಲಿ ಒಬ್ಬರು ಗರ್ಭಿಣಿ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ 80 ಪುರುಷರು ಮತ್ತು 28 ಮಹಿಳೆಯರು ಇದ್ದರು ಎಂದು ಮಾಹಿತಿ ನೀಡಿದ್ದಾರೆ.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಇಬ್ಬರನ್ನು ಹೊರತುಪಡಿಸಿದರೆ ಯಾವುದೇ ಪ್ರಯಾಣಿಕರಲ್ಲಿ ಕೊರೋನ ವೈರಾಣು ಸೋಂಕಿನ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಮಾಲಿಯಿಂದ ಆಗಮಿಸಿದ 152 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಇಬ್ಬರಲ್ಲಿ ಕೊರೋನ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರನ್ನು ನಿಗದಿತ ಆಸ್ಪತ್ರೆಗೆ ಕ್ವಾರಂಟೈನ್‍ಗಾಗಿ ಕಳುಹಿಸಿಕೊಡಲಾಗಿದೆ. ಉಳಿದವರನ್ನು ವಿವಿಧ ಹೊಟೇಲ್‍ಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News