ಗ್ರಾಪಂಗಳಿಗೆ ಆಡಳಿತ ಸಮಿತಿ: ಬಿಜೆಪಿ ಸ್ವಾಗತ

Update: 2020-05-23 15:42 GMT

ಉಡುಪಿ, ಮೇ 23: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಕಾಯ್ದೆ 1994ರ ಪ್ರಕಾರ ರಾಜ್ಯಾದ್ಯಂತ ಆಡಳಿತ ಅವಧಿ ಮುಗಿಯಲಿರುವ ಗ್ರಾಪಂಗಳ ವ್ಯವಸ್ಥಿತ ಆಡಳಿತಕ್ಕಾಗಿ ಮುಂದಿನ 6 ತಿಂಗಳ ಅವಧಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕದೊಂದಿಗೆ ಆಡಳಿತ ಸಮಿತಿ ರಚಿಸುವ ರಾಜ್ಯ ಸರಕಾರದ ತೀರ್ಮಾನವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ಕಲಂ 8ರ ಪ್ರಕಾರ ಗ್ರಾಪಂಗಳಿಗೆ ನಾಮ ನಿರ್ದೇಶಿತ ಸದಸ್ಯರನ್ನು ನೇಮಿಸಿ, ಆಡಳಿತ ಸಮಿತಿ ರಚಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳು ಹೊಂದಿರುವ ಬಗ್ಗೆ ಸ್ಪಷ್ಟ ಉಲ್ಲೇಖವಿದೆ. ಪ್ರಚಲಿತ ವಿದ್ಯಮಾನದಲ್ಲಿ ನಾಗರಿಕ ಸಮಸ್ಯೆಗಳ ಪರಿಹಾರ ಹಾಗೂ ಮೂಲಭೂತ ಸೌಕರ್ಯಗಳ ಆದ್ಯತೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಈ ಸಮಯೋಚಿತ ನಿರ್ಧಾರದ ಬಗ್ಗೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ಅಪಸ್ವರ ಎತ್ತುತ್ತಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News