ಮಂಡ್ಯ: ಕೊರೋನ ಸೋಂಕಿತರ ಸಂಖ್ಯೆ 235ಕ್ಕೆ ಏರಿಕೆ

Update: 2020-05-23 16:30 GMT
ಸಾಂದರ್ಭಿಕ ಚಿತ್ರ

ಮಂಡ್ಯ, ಮೇ 23: ಮುಂಬೈನಿಂದ ಬಂದಿರುವ 28 ಮಂದಿಯಲ್ಲಿ ಶನಿವಾರ ಕೊರೋನ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 235ಕ್ಕೆ ಏರಿದೆ. 26 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದು, 211 ಜನರು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1,639 ಜನರ ಪರೀಕ್ಷಾ ವರದಿ ಬರಬೇಕಾಗಿದೆ.

ಮುಂಬೈನಿಂದ ಆಗಮಿಸಿದವರನ್ನು ಕ್ವಾರಂಟೈನ್ ಮಾಡಿ ಗಂಟಲ ದ್ರವ ಪರೀಕ್ಷೆ ನಡೆಸಿದಾಗ 28 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ನೆಗೆಟಿವ್ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನ ಎರಡನೇ ಹಂತದಲ್ಲೇ ಇದೆ. ಸಮಾಜಕ್ಕೆ ಹರಡದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಸರಕಾರ ಮತ್ತು ಜಿಲ್ಲಾಡಳಿತದ ನಿರ್ದೇಶನಗಳನ್ನು ಪಾಲಿಸಿಕೊಂಡು ಜನರು ಸುರಕ್ಷಿತ ಅಂತರ ಕಾಪಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News