ಸಿಇಟಿ ಕೇಂದ್ರ ಬದಲಾವಣೆಗೆ ಮೇ 31ರವರೆಗೂ ಅವಕಾಶ

Update: 2020-05-23 16:58 GMT

ಬೆಂಗಳೂರು, ಮೇ 23: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಕೇಂದ್ರ ಬದಲಾವಣೆ ಮಾಡಿಕೊಳ್ಳುವ ಅವಧಿಯನ್ನು ಮೇ 31 ರವರೆಗೂ ವಿಸ್ತರಿಸಲಾಗಿದೆ.

ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಸ್ಥಳಗಳನ್ನು ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‍ಸೈಟ್‍ಗೆ ಭೇಟಿ ನೀಡಬಹುದು. ಅಥವಾ ಪ್ರಾಧಿಕಾರದ ಇ ಮೇಲ್‍ಗೆ ಮೇಲ್ ಕಳಿಸುವ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News