ಮೇ 24ರಂದು ಉಡುಪಿ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ: ಡಿಸಿ ಜಗದೀಶ್
Update: 2020-05-23 22:48 IST
ಉಡುಪಿ, ಮೇ 23: ಉಡುಪಿ ಜಿಲ್ಲೆಯಲ್ಲಿ ಮೇ 24ರಂದು ಸಂಪೂರ್ಣ ಲಾಕ್ ಡೌನ್ ಇದ್ದರೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಹಣ್ಣು, ಹಾಲು, ತರಕಾರಿ, ದಿನಸಿ ಮತ್ತು ಮೀನು ಮಾಂಸದ ಅಂಗಡಿಗಳು ತೆರೆಯಲು ಮತ್ತು ಹೋಟೆಲ್ ಗಳಲ್ಲಿ ಪಾರ್ಸೆಲ್ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ